“ಅಟಲ್ ಟಿಂಕರಿಂಗ್ ಪ್ರಯೋಗಾಲಯದ ಉದ್ಘಾಟನಾ ಕಾರ್ಯಕ್ರಮ ಶನಿವಾರ ರಂದು ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.
ಬೆಟಗೇರಿಯ ಪ್ರೌಢಶಾಲೆಯ ರಮೇಶ ಅಳಗುಂಡಿ ಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ
ಆಧುನಿಕ ಕೃಷಿ ಪದ್ದತಿಯಲ್ಲಿ ವೈಜ್ಞಾನಿಕ ತಂತ್ರಜ್ಞಾನ ಬಳಸಿ ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ ಪಡೆಯುವ ಕುರಿತು ಸಲಹೆ ನೀಡಿದರು.
ಗುರ್ಲಾಪೂರ ಪ್ರೌಢಶಾಲಾ ವಿಜ್ಞಾನ ಶಿಕ್ಷಕ ರಾದ ಶಿವಲಿಂಗ ಅರಗಿ ಯವರು ಮಾತನಾಡುತ್ತಾ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿರುವ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಆ ಸಮಸ್ಯೆಗೆ ವೈಜ್ಞಾನಿಕ ಸಂಶೋದನೆಯ ಮೂಲಕ ಪರಿಹಾರ ಕಂಡುಕೊಳ್ಳುವ ಕುರಿತು ಮಕ್ಕಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಆಡಳಿತಾಧಿಕಾರಿಗಳಾದ ಎಸ್.ಎಮ್.ಕಮದಾಳ. ವಹಿಸಿದ್ದರು. ಕಾರ್ಯಕ್ರಮದಲ್ಲಿ ಎ.ಎಲ್ ಶಿಂಧಿಹಟ್ಟಿ, ಚೈತನ್ಯ ಶಾಲೆಯ ಮುಖ್ಯೋಪಾಧ್ಯಯರಾದ ಶ್ರೀಮತಿ ಎಸ್.ಎ.ಪಾಟೀಲ ಮತ್ತು ಕುಮಾರ ಹುಬ್ಬಳ್ಳಿ ಉಪಸ್ಥಿತರಿದ್ದರು.