ಮೂಡಲಗಿ: ಪಿ.ಎಫ್.ಐ ಸಂಘಟನೆ ಐಸಿಸ್ ನಂಥ ಜಾಗತಿಕ ಉಗ್ರ ಸಂಘಟನೆಗಳ ಜೊತೆ ಸಂಬಂಧ ಹೊಂದಿ, ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಸಂಚು ರೂಪಿಸಿದ್ದು ಮಾತ್ರವಲ್ಲದೇ, ಭವಿಷ್ಯದಲ್ಲಿ ಪಿಎಫ್‍ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ ಅವರು ತೆಗೆದುಕೊಂಡ ಖಡಕ್ ನಿರ್ಧಾರದಿಂದ ದೇಶಾದಂತ್ಯ ಪಿಎಫ್‍ಐ ಮತ್ತುಸಹವರ್ತಿ ಸಂಘಟನೆಗಳನ್ನು ನಿμÉೀಧಿಸಿದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.
ಬುಧವಾರ ಸೆ.28 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಈ ಹಿಂದೆ ಸಿಮಿ ಸಂಘಟನೆಯನ್ನು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರಕಾರ ಬ್ಯಾನ್ ಮಾಡಿತ್ತು. ಅದರ ರೂಪಾಂತರಿ ತಳಿ ಪಿಎಫ್‍ಐನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರಕಾರವೇ ನಿμÉೀಧಿಸಿದೆ. ದೇಶದ ಆಂತರಿಕ ಹಾಗೂ ಬಾಹ್ಯ ರಕ್ಷಣೆಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದರು. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಪಿ.ಎಫ್.ಐ ಸಂಘಟನೆಯ ವಿರುದ್ಧ ದಾಖಲಾಗಿದ್ದ 100ಕ್ಕೂ ಹೆಚ್ಚು ಪ್ರಕರಣ ವಾಪಾಸ್ ಪಡೆಯಲಾಗಿತ್ತು. 1400ಕ್ಕೂ ಹೆಚ್ಚು ಪಿಎಫ್‍ಐ ಉಗ್ರರಿಗೆ ಸಿದ್ದರಾಮಯ್ಯ ಕ್ಷಮಾದಾನ ನೀಡಿದ್ದರು. ಇದರ ಫಲವಾಗಿ ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಸರಣಿ ಕೊಲೆಗೆ ಕಾಂಗ್ರೇಸ್ ಕಾರಣವಾಗಿತ್ತು. ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಇದೇ ಸಂಘಟನೆ ಕಾರ್ಯಕರ್ತರು ಪೆÇಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದಾಗ ಕಾಂಗ್ರೇಸ್ ನಾಯಕರು ತುಟಿ ಬಿಚ್ಚಲಿಲ್ಲ. ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪೆÇಲೀಸ್ ಠಾಣೆಗೆ ಮುತ್ತಿಗೆ ಹಾಕಿ ತನ್ನದೇ ಶಾಸಕರ ಮನೆಗೆ ಬೆಂಕಿ ಹಚ್ಚಿದಾಗಲೂ ಕಾಂಗ್ರೆಸ್ ಧ್ವನಿ ಎತ್ತಿರಲಿಲ್ಲ. ಇದು ಪಿಎಫ್‍ಐ ಪರ ಕಾಂಗ್ರೆಸ್ ತಾಳಿದ್ದ ಮೃಧು ಧೋರಣೆಗೆ ಸಾಕ್ಷಿಯಾಗಿತ್ತಲ್ಲವೇ? ಕೇಂದ್ರದಲ್ಲೂ ಬಿಜೆಪಿ ಸರಕಾರ ಇದೆ, ರಾಜ್ಯದಲ್ಲೂ ಬಿಜೆಪಿ ಸರಕಾರ ಇದೆ. ಸಾಮಥ್ರ್ಯ ಇದ್ದರೆ ಪಿಎಫ್‍ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ ನೀಡಲಾಗಿದೆ ಎಂದರು.
Home / Recent Posts / ಸಾಮಥ್ರ್ಯ ಇದ್ದರೆ ಪಿಎಫ್‍ಐ ಬ್ಯಾನ್ ಮಾಡಿ ಎಂದು ಸಿದ್ದರಾಮಯ್ಯ ಆಗಾಗ ಮಾಡುತ್ತಿದ್ದ ಉದ್ರೇಕಕಾರಿ ಭಾಷಣಕ್ಕೆ ಈಗ ಉತ್ತರ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
Check Also
ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ
Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …