ಮೂಡಲಗಿ: ವಿದ್ಯಾರ್ಥಿಗಳು ದಿನನಿತ್ಯದ ಅಭ್ಯಾಸದೊಂದಿಗೆ ಪ್ರಾರ್ಥನೆ ಪೂಜೆ ಪುನಸ್ಕಾರಗಳನ್ನು ತಮ್ಮ ದಿನಚರಿಯಲ್ಲಿ ಬಳಸಿಕೊಂಡಾಗ ಶುದ್ದವಾದ ಭಕ್ತಿ ಮನಸ್ಸು ಅಭ್ಯಾಸದಲ್ಲಿ ಏಕಾಗ್ರತೆ ತರುತ್ತವೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಹೇಳಿದರು.
ಅವರು ಸೋಮವಾರದಂದು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಸರಸ್ವತಿ ಪೂಜೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ, ಭಯ, ಭಕ್ತಿ, ಗುರುಹಿರಿಯರಿಗೆ ಗೌರವ, ನಮ್ಮ ನಾಡಿನ ಸಂಸ್ಕøತಿ ಸಂಸ್ಕಾರಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಉತ್ತಮ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕೆಂದರು. ಉಚಿತ ಸಮವಸ್ತ್ರ ಪಠ್ಯ ಪುಸ್ತಕ ಅಕ್ಷರದಾಸೋಹ ಕ್ಷೀರ ಯೋಜನೆ ಇಲಾಖೆಯ ಮುಂತಾದ ಯೋಜನೆಗಳ ಲಾಭ ಪಡೆದು ಗುಣಮಟ್ಟದ ಶಿಕ್ಷಣ ಪಡೆಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಆಗಮಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪುಷ್ಪ, ಸಿಹಿ ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ, ಶೀಲಾ ಕುಲಕಣಿ, ಸಂಗೀತಾ ತಳವಾರ, ಪುಷ್ಪಾ ಭರಮದೆ, ಲಕ್ಷ್ಮೀ ಹೆಬ್ಬಾಳ, ಮಹಾದೇವ ಗೋಮಾಡಿ, ಶಂಕರ ಲಮಾಣಿ, ಕಿರಣ ಭಜಂತ್ರಿ, ರೂಪಾ ಗದಾಡಿ, ಶಿವಲೀಲಾ ಹಣಮನ್ನವರ, ಖಾತೂನ ನದಾಫ, ಹೊಳೆಪ್ಪ ಗದಾಡಿ ಉಪಸ್ಥಿತರಿದ್ದರು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …