ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ.ಐ.ಸಿ ಆಸ್ಪತ್ರೆ ಮಾಡಲು ಅರ್ಹತೆ ಇದೆ ಎಂದು ಸಚಿವರು ನೀಡಿರುವ ಪತ್ರದ ಕುರಿತು ಅಭಿನಂದಿಸಿ, ಆದಷ್ಟು ಬೇಗ ಆಸ್ಪತ್ರೆಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ವಿನಂತಿ ಮಾಡಲಾಯಿತು. ಅದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ನಿರ್ಮಾಣ ಕಾರ್ಯಗಳಿಗೆ ಆಡಳಿತಾತ್ಮಕ ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
