ಮೂಡಲಗಿ: ಪೆ.18ರಂದು ದಲಿತ ವಚನಕಾರರ ಜಯಂತಿಯನ್ನು ತಾಲೂಕಿನ ಎಲ್ಲ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡಬೇಕು ಹಾಗೂ ತಾಲೂಕಾಡಳಿತದಿಂದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜಯಂತಿಯನ್ನು ಆಚರಿಸಲಾಗುವುದು ಇದೇ ಸಂದರ್ಭದಲ್ಲಿ ದಲಿತ ಸಮಾಜದಲ್ಲಿ ಇರುವಂತ ಹಿರಿಯ ಜನಪದ ಕಲಾವಿದರನ್ನು ಸತ್ಕರಿಸಿ ಗೌರವಿಸಲಾಗುವುದು ಎಂದು ತಹಶೀಲ್ದಾರ ಪ್ರಶಾಂತ ಚನಗೊಂಡ ಹೇಳಿದರು.
ಶುಕ್ರವಾರದಂದು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜರುಗಿದ ದಲಿತ ವಚನಕಾರರ ಜಯಂತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕಾಡಳಿತದಿಂದ ಜಯಂತಿಯನ್ನು ಆಚರಿಸಲಾಗುವುದು ಆದರಿಂದ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೂಡಲಗಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ. ಚಿನ್ನನ್ನವರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇರ್ಶಕ ಎಸ್ ವಿ ಕಲ್ಲಪ್ಪನ್ನವರ, ಬಿಇಒ ಅಜೀತ ಮನ್ನಿಕೇರಿ, ಸಿಡಿಪಿಒ ಯಲ್ಲಪ್ಪ ಗದಾಡಿ, ಪಿಎಸ್‍ಐ ಸೋಮೇಶ ಗೆಜ್ಜಿ ಹಾಗೂ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.