Breaking News
Home / ತಾಲ್ಲೂಕು / ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮಂಜೂರು

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮಂಜೂರು

Spread the love

ಗೋಕಾಕ : ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದಾಗಿ ತಾಲೂಕಿನ ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮಂಜೂರಾಗಿದ್ದು, ಈ ಕಟ್ಟಡ ಕಾಮಗಾರಿಗೆ 19.86 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು.
ತಾಲೂಕಿನ ತಪಸಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾಗಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ(ಪ.ಜಾ)ಯ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಳೆದ 15 ವರ್ಷಗಳಿಂದ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣದ ಅಮೂಲಾಗ್ರ ಬದಲಾವಣೆಗಾಗಿ ಶ್ರಮಿಸುತ್ತಿದ್ದಾರೆ. ಗೋಕಾಕ ಹಾಗೂ ಮೂಡಲಗಿ ತಾಲೂಕಿನಲ್ಲಿ ಒಟ್ಟು 14 ವಸತಿ ಶಾಲೆಗಳನ್ನು ಹಾಗೂ 22 ಸರ್ಕಾರಿ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಿದ್ದಾರೆ. ವಡೇರಹಟ್ಟಿಯಲ್ಲಿ ಕಸ್ತೂರಿ ಬಾ ಗಾಂಧಿ ಬಾಲಕೀಯರ ವಸತಿ ಶಾಲೆ ಆರಂಭಿಸಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬರಲು ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.
ಈಗಾಗಲೇ ಆರಂಭವಾಗಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯು ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭ ಮಾಡಲು ತಪಸಿಯಲ್ಲಿ 10 ಎಕರೆ ಪ್ರದೇಶದಲ್ಲಿ ನಿರ್ಮಾಣ ಕಾಮಗಾರಿ ನಡೆಯಲಿದೆ. 6ನೇ ತರಗತಿಯಿಂದ ಪಿಯುಸಿವರೆಗೆ ವಿದ್ಯಾರ್ಥಿಗಳಿಗೆ ಉಚಿತ ವಸತಿ ಶಿಕ್ಷಣ ದೊರಕಲಿದ್ದು, ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ವಸತಿ ಶಾಲೆಯಲ್ಲಿ ಒಟ್ಟು 560 ವಿದ್ಯಾರ್ಥಿಗಳು ವ್ಯಾಸಂಗ ಮಾಡಲಿದ್ದಾರೆ ಎಂದು ಹೇಳಿದರು.
ಕೋವಿಡ್-19 ಹಿನ್ನೆಲೆಯಲ್ಲಿ ಅರಭಾವಿ ಮತಕ್ಷೇತ್ರದಾಧ್ಯಂತ ಜನರ ಆರೋಗ್ಯ ಸುರಕ್ಷತೆಗಾಗಿ 2.50 ಲಕ್ಷಕ್ಕೂ ಅಧಿಕ ಮಾಸ್ಕ್‍ಗಳನ್ನು ನೀಡಿದ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಮತ್ತು ಪರೀಕ್ಷಾ ಸಿಬ್ಬಂದಿಗಳಿಗೆ ಒಟ್ಟು 7000 ಮಾಸ್ಕ್ ಮತ್ತು ಸ್ಯಾನಿಟೈಜರ್‍ಗಳನ್ನು ನೀಡಲಿದ್ದಾರೆ. ಜೊತೆಗೆ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲು ಸಾರಿಗೆ ಸೌಲಭ್ಯ ಕಲ್ಪಿಸಿಕೊಡಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಹೇಳಿದರು.
ಅತಿಥಿಯಾಗಿ ಆಗಮಿಸಿದ್ದ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ತಪಸಿ ಗ್ರಾಮಕ್ಕೆ ವಸತಿ ಶಾಲೆಯನ್ನು ಮಂಜೂರು ಮಾಡಿಸಿ, ಸುಸಜ್ಜಿತ ಕಟ್ಟಡ ನಿರ್ಮಾಣಕ್ಕಾಗಿ ಅನುದಾನ ತಂದಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಿದರು. ವಸತಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣ ಕ್ಷೇತ್ರಕ್ಕೆ ತೋರುತ್ತಿರುವ ಕಾಳಜಿಯಿಂದಾಗಿ ನಮ್ಮ ತಾಲೂಕುಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹೊರಹೊಮ್ಮುತ್ತಿದ್ದಾರೆಂದು ಹೇಳಿದರು.
ಮೆಳವಂಕಿ ಜಿಪಂ ಸದಸ್ಯೆ ಶಶಿಕಲಾ ಸಣ್ಣಕ್ಕಿ ಅವರು ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮಾತನಾಡಿ, ತಪಸಿ ಗ್ರಾಮದ ಅಭಿವೃದ್ಧಿಗಾಗಿ ಬಾಲಚಂದ್ರ ಜಾರಕಿಹೊಳಿ ಅವರು ಕೋಟ್ಯಾಂತರ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಪರ ಕಾಮಗಾರಿಗಳನ್ನು ಮಂಜೂರು ಮಾಡಿಸಿದ್ದಾರೆ. ತಪಸಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಹಿರಿಯ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಲು ಈಗಾಗಲೇ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಹೇಳಿದರು.
ಸ್ಥಳೀಯ ಸುರೇಶ ಮಹಾರಾಜರು ಈ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಬಸವರಾಜ ಸಾಯನ್ನವರ, ಮೂಡಲಗಿ ತಹಶೀಲ್ದಾರ ದಿಲ್‍ಶಾದ ಮಹಾತ, ಗ್ರಾಪಂ ಅಧ್ಯಕ್ಷೆ ಹನಮವ್ವಾ ವಾಳದ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ವ್ಹಿ. ಕಲ್ಲಪ್ಪನವರ, ಹನಮಂತ ತೇರದಾಳ, ಮುತ್ತೆಪ್ಪ ಕುಳ್ಳೂರ, ರವಿ ಪರುಶೆಟ್ಟಿ, ಮುತ್ತೆಪ್ಪ ಮನ್ನಾಪೂರ, ಲಕ್ಷ್ಮಣ ಅರಬನ್ನವರ, ರಾಯಪ್ಪ ತಿರಕನ್ನವರ, ಮಾರುತಿ ಸಾಯನ್ನವರ, ಲಕ್ಷ್ಮಣ ಯಳ್ಳೂರ, ವಾಸು ಗಲಗಲಿ, ಲಕ್ಕಪ್ಪ ಕುರೇರ, ಗುರುನಾಥ ಪೊಲೀಸ್‍ನವರ, ದುಂಡಪ್ಪ ಕುದರಿ, ಮಲ್ಲಪ್ಪ ಗುಡದಾರ, ಕವಶಿಸಂ ಸಂಘದ ಜಿಲ್ಲಾ ಸಮನ್ವಯಾಧಿಕಾರಿ ಆರ್.ವಾಯ್.ಗಂಗರಡ್ಡಿ, ಕೌಜಲಗಿ ನಾಡಕಾರ್ಯಾಲಯದ ಉಪತಹಶೀಲ್ದಾರ ಕಟ್ಟಿಮನಿ, ಪಿಡಿಓ ರಂಗಪ್ಪ ಗುಜನಟ್ಟಿ, ವಸತಿ ಶಾಲೆಯ ಪ್ರಾಂಶುಪಾಲ ಕೆ.ಎಸ್. ಮಾರಾಪೂರ, ಎನ್.ಜಿ. ಯರಗಟ್ಟಿ, ತಪಸಿ ಗ್ರಾಮ ಪಂಚಾಯತ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಕಟ್ಟಡದ ಕಾಮಗಾರಿಯನ್ನು ಬೆಂಗಳೂರಿನ ನೇಹಾ ಕನ್‍ಸ್ಟ್ರಕ್ಷನ್ಸ್ ಕಂಪನಿಗೆ ಗುತ್ತಿಗೆ ನೀಡಲಾಗಿದೆ.
“ಜೂನ್ 25 ರಿಂದ ಜುಲೈ 4 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಈಗಾಗಲೇ ಇದಕ್ಕಾಗಿ ಸಕಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪರೀಕ್ಷೆಗೆ ಬಾಕಿ ಉಳಿದಿರುವ ದಿನಗಳನ್ನು ಸದ್ಬಳಕೆ ಮಾಡಿಕೊಂಡು ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತುಕೊಂಡು ಅಭ್ಯಸಿಸಬೇಕು. ಮಕ್ಕಳ ಸುರಕ್ಷತೆಗೆ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು. ವಿಶ್ವವ್ಯಾಪಿಯಾಗಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ವೈರಸ್ ತಡೆಗಟ್ಟುವಿಕೆಗೆ ನಾವೆಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈ ವರ್ಷವೂ ಮೂಡಲಗಿ ವಲಯದ ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲಿ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ ನನ್ನ ಶುಭಾಶಯಗಳು”.
ಬಾಲಚಂದ್ರ ಜಾರಕಿಹೊಳಿ, ಅಧ್ಯಕ್ಷರು, ಕಹಾಮ & ಶಾಸಕರು.


Spread the love

About inmudalgi

Check Also

‘ಸಮಾಜ ಸೇವೆಯಲ್ಲಿ ನಿಸ್ವಾರ್ಥತೆ ಇರಲಿ’- ರಾಜಶೇಖರ ಹಿರೇಮಠ

Spread the loveಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 2025-26ನೇ ಸಾಲಿನ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಅಧ್ಯಕ್ಷ ವಿಶಾಲ ಶೀಲವಂತ ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ