Breaking News
Home / Recent Posts / ಮೂಡಲಗಿಯಲ್ಲಿ ಅಕ್ರಮ ಮದ್ಯಕ್ಕಿಲ್ಲ ಕಡಿವಾಣ…! ನೀತಿ ಸಂಹಿತೆ ಉಲ್ಘಂಘನೆ

ಮೂಡಲಗಿಯಲ್ಲಿ ಅಕ್ರಮ ಮದ್ಯಕ್ಕಿಲ್ಲ ಕಡಿವಾಣ…! ನೀತಿ ಸಂಹಿತೆ ಉಲ್ಘಂಘನೆ

Spread the love

ಮೂಡಲಗಿ : ತಾಲೂಕಿನ ಹಳ್ಳಿ, ಹಳ್ಳಿಗಳಲ್ಲಿ ಮಿನಿ ಬಾರಗಳು ತಲೆ ಎತ್ತಿ ಅಕ್ರಮ ಮದ್ಯ ಮಾರಾಟ ಜೋರಾಗಿ ನಡೆಯುತ್ತಿದ್ದು, ಮದ್ಯ ವ್ಯವಸನಿಗಳು ಅಮಲಿನಲ್ಲಿಯೇ ನಿತ್ಯ ಕಾಲಕಳೆಯುವಂತಾಗಿದೆ. ಮಕ್ಕಳು, ಮಹಿಳೆಯರು, ವೃದ್ಧ ತಂದೆ-ತಾಯoದಿರು ಅಕ್ರಮ ಮದ್ಯಮಾರಾಟಗಾರರಿಗೆ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.

ಅಧಿಕಾರಿಗಳ ಕಣ್ಣಿಗೆ ಮಣ್ಣು ಎರಚಿ ಗ್ರಾಮೀಣ ಪ್ರದೇಶದಲ್ಲಿ ನಾಯಿ ಕೊಡೆಗಳಂತೆ ಎಲ್ಲಿ ಬೇಕೆಂದರಲ್ಲಿ ಅಕ್ರಮ ಮದ್ಯದ ಅಂಗಡಿಗಳು ತಲೆ ಎತ್ತಿವೆ. ಪಾನ್, ಬೀಡಾ ಅಂಗಡಿ, ಹೋಟೆಲ್, ಕ್ರೋಲ್ಡ್ಡ್ರಿಂಕ್ಸ್ ಅಂಗಡಿ, ಡಾಬಾಗಳು ಸೇರಿದಂತೆ ಇತರೆ ಅಂಗಡಿಗಳಲ್ಲಿ ಇಷ್ಟು ದಿನಗಳ ಕಾಲ ಅಕ್ರಮ ಮದ್ಯ ಮಾರಾಟ ಜೋರಾಗಿತ್ತು. ಇದಕ್ಕೆ ಕಡಿವಾಣ ಹಾಕಬೇಕು ಎಂದು ಅನೇಕ ವರ್ಷಗಳಿಂದ ಸಂಘ, ಸಂಸ್ಥೆಗಳು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಅಕ್ರಮ ಮದ್ಯ ಮಾರಾಟ ಸ್ಥಗಿತಗೊಂಡಿರಲಿಲ್ಲ. ಇವಾಗ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದರೂ ಅಕ್ರಮ ಮದ್ಯ ಮಾರಾಟ ಸ್ಥಗಿತಗೊಂಡಿಲ್ಲ ಎಂಬುದು ವಿಷಾದಕರ ಸಂಗತಿ.

ಚುನಾವಣೆ ಹೊಸ್ತಿನಲ್ಲಿ ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದಲಾಗಿದರೂ ಕೂಡಾ ಕೆಲವು ಪಾನ್, ಬೀಡಾ ಅಂಗಡಿ, ಹೋಟೆಲ್, ಕ್ರೋಲ್ಡ್ಡ್ರಿಂಕ್ಸ್ ಅಂಗಡಿ, ಡಾಬಾಗಳಲ್ಲಿ ಅಕ್ರಮ ಮಾರಾಟ ಮಾಡಲಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿ ಎನ್ನುವಂತೆ ಮೂಡಲಗಿ ಸಮೀಪದ ಗುರ್ಲಾಪೂರ ಕ್ರಾಸ್ ಬಳಿ ಸಣ್ಣ ವಯಸ್ಸಿನ ಬಾಲಕ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ದ್ಯಶ ಕಂಡು ಬಂದಿದ್ದು, ಶಿಕ್ಷಣ ಕಲಿಯಬೇಕಾದ ಬಾಲಕ ಈ ರೀತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ದಂಧೆಗೆ ಇಳಿದಿರುವುದು ಎಷ್ಟೋಂದು ಸರಿ ?. ನೀತಿ ಸಂಹಿತೆ ಜಾರಿಯಾದ ಬೆನ್ನಲೆ ಅಕ್ರಮ ಮದ್ಯ ಮಾರಾಟ ನಿಯಂತ್ರಿಸಬೇಕಾಗಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕರ್ತವ್ಯ. ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಆರೋಪವಾಗಿದೆ.

ಈಗಾಗಲೇ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವಂತ ರಾಜಾಪೂರ, ನಾಗನೂರ ಸೇರಿದಂತೆ ಅನೇಕ ಗ್ರಾಮಗಳ ಸುತ್ತಮುತ್ತಲಿನ ಧಾಬಾ, ಪಾನ್, ಬೀಡಾ ಅಂಗಡಿಗಳ ಮೇಲೆ ದಾಳಿ ಮಾಡಿ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಶೀಘ್ರದಲ್ಲೇ ಧೀಡಿರ್ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟಾದಾರರ ಮೇಲೆ ಪ್ರಕರಣ ದಾಖಲಿಸಲಾಗುವುದು. ಗುರ್ಲಾಪೂರದಲ್ಲಿ ಅಕ್ರಮ ಮದ್ಯ ಮಾರಾಟಾ ಮಾಡುತ್ತಿರುವ ಬಾಲಕನ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅದರ ಬಗ್ಗೆ ಪರಿಶೀಲನೆ ನಡೆಸಿ ಮಾರಾಟಾದಾರರ ಮೇಲೆ ಸೂಕ್ತ ಕ್ರಮಕೈಗೊಳ್ಳಲಾಗುವುದು.
ಪ್ರಭಾವತಿ ಎಫ್ (ಅರಭಾವಿ08 ಚುನಾವಣಾಧಿಕಾರಿ)

ಅಧಿಕಾರಿಗಳ ಕಣ್ಣತಪ್ಪಿಸಿ ಕೇಲವರು ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿರುವ ಹಿನ್ನೆಲೆ ಪ್ರತಿನಿತ್ಯ ಗ್ರಾಮಗಳಿಗೆ ಭೇಟಿ ನೀಡಲಾಗುತ್ತಿದ್ದು ಮಾರಾಟಾ ಮಾಡುತ್ತಿರುವ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿಲಾಗಿದೆ. ಅಧಿಕಾರಿಗಳ ಕಣ್ಣತಪ್ಪಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಗುರ್ಲಾಪೂರದಲ್ಲಿ ಬಾಲಕ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಸೂಕ್ತ ಕ್ರಮಕೈಗೊಳ್ಳಲಾಗುವುದು.

ಆಶಾರಾಣಿ ಕೆ (ಅಬಕಾರಿ ನೀರಿಕ್ಷಕರು ಗೋಕಾಕ ವಲಯ)


Spread the love

About inmudalgi

Check Also

ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿ: ವಿನಯಕುಮಾರ ನಾಯ್ಡು

Spread the love ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿ: ವಿನಯಕುಮಾರ ನಾಯ್ಡು ಬೆಟಗೇರಿ: ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆ-ಮನೆಗಳಲ್ಲಿ ಶೌಚಾಲಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ