ಬಿಜೆಪಿ ಬಾಲಚಂದ್ರಗೆ ತಾಲ್ಲೂಕು ಪಿಂಚಣಿದಾರರ ಸಂಘದಿಂದ ಬೆಂಬಲ
ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲವನ್ನು ನೀಡಿದ್ದೇವೆ ಎಂದು ಮೂಡಲಗಿ ತಾಲ್ಲೂಕಾ ಪಿಂಚಣಿದಾರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎಸ್.ಟಿ, ಜಡ್ಲಿ, ಉಪಾಧ್ಯಕ್ಷ ಎಸ್.ಬಿ. ತುಪ್ಪದ ಹಾಗೂ ಕಾರ್ಯದರ್ಶಿ ಎ.ಎಚ್. ಒಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣ ಪ್ರೇಮಿಗಳಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಶಾಲೆ, ಕಾಲೇಜುಗಳನ್ನು ತೆರೆದು ಶಿಕ್ಷಣ ಕ್ರಾಂತಿಯನ್ನು ಮಾಡಿದ್ದಾರೆ. ಅನೇಕ ಬಡ ಜನರಿಗೆ ಕಷ್ಟಗಳಿಗೆ ನೆರವಾಗಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ಮಾಡಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮೇ 10ರಂದು ಮತ ಚಲಾಯಿಸಲು ಸಂಘದ ಸರ್ವ ಸದಸ್ಯರು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
IN MUDALGI Latest Kannada News