Breaking News
Home / Recent Posts / ಪರಿಸರ ಸಂರಕ್ಷಣೆಗೆ ನಾವು ಸ್ವಯಂಪ್ರೇರಿತರಾಗಿ ಗಿಡಿ, ಮರಗಳನ್ನು ಬೆಳೆಸಬೇಕಿದೆ- ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ

ಪರಿಸರ ಸಂರಕ್ಷಣೆಗೆ ನಾವು ಸ್ವಯಂಪ್ರೇರಿತರಾಗಿ ಗಿಡಿ, ಮರಗಳನ್ನು ಬೆಳೆಸಬೇಕಿದೆ- ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ

Spread the love

ಮೂಡಲಗಿ : ಮನುಷ್ಯ ಬದುಕಲು ಅನಿವಾರ್ಯವಾಗಿರುವ ಮೂಲ ಅವಶ್ಯಕಗಳು ಸಿಗುವುದೇ ಪರಿಸರದಿಂದ ಹೀಗಾಗಿ ಸುಸ್ಥಿರ ಬದುಕಿಗೆ ಪರಿಸರವನ್ನು ಸಂಕ್ಷಿಸುವುದು ಅಗತ್ಯ. ಪರಿಸರ ಸಂರಕ್ಷಣೆ ಎನ್ನುವುದು ಸಾಮೂಹಿಕ ಜವಾಬ್ದಾರಿ ಮಾತ್ರವಲ್ಲದದೇ ಪ್ರತಿಯೋರ್ವರ ಹೊಣೆಗಾರಿಕೆಯೂ ಆಗಿದೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.

ಶುಕ್ರವಾರದಂದು ಪಟ್ಟಣದ ಗಂಗಾನಗರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಸ್ಟೆಲ್ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ನಿರ್ಮಿಸಲಾದ ಕಾವೇರಿ ಉದ್ಯಾನವ ಹಾಗೂ ಕಾವೇರಿ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆಗೆ ನಾವು ಸ್ವಯಂಪ್ರೇರಿತರಾಗಿ ಗಿಡಿ, ಮರಗಳನ್ನು ಬೆಳೆಸಬೇಕಿದೆ. ಇದು ಸದ್ಯ ಆಗಬೇಕಾದ ತುರ್ತು ಕಾರ್ಯವಾಗಿದೆ. ಆಪ್ತರ ಸಂತೋಷದ ಕ್ಷಣಗಳಿಗೆ ಕಾರಣರಾಗಲು ನಾವು ಸವಿನೆನಪಿಗಾಗಿ ಲಕ್ಷಾಂತರ ಮೌಲ್ಯದ ಉಡುಗೂರೆ ನೀಡುತ್ತೇವೆ. ಇದರ ಜತೆಗೆ ಪರಿಸರಕ್ಕೆ ಪೂರಕವಾಗುವಂತೆ ಒಂದು ಗಿಡ ನೆಟ್ಟು ಪೋಷಿಸಿದಾಗ ಪರಿಸರ ಸಂರಕ್ಷಣೆಗೆ ವೈಯಕ್ತಿಕ ಜವಾಬ್ದಾರಿ ಮೆರೆದಂತೆ ಆಗುತ್ತದೆ ಎಂದರು.

ಬಿಇಓ ಅಜೀತ ಮನ್ನಿಕೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕಾಧಿಕಾರಿ ಅಶೋಕ ಮಲಬನ್ನವರ ಮಾತನಾಡಿ, ಹಾಸ್ಟೆಲ್ ಮಕ್ಕಳ ಉತ್ತಮ ಕಲಿಕೆಗಾಗಿ ಸಿಬ್ಬಂದಿಗಳು ಹಾಗೂ ಪರಿಸರ ಪ್ರೇಮಿಗಳು ಸೇರಿ ವಿವಿಧ ತರಹದ ಔಷಧಿ ಗಿಡಗಳನ್ನು ಹಾಗೂ ವಿವಿಧ ತರದ ಗಿಡಗಳನ್ನು ನೆಟ್ಟು ಸುಂದರವಾದ ಕಾವೇರಿ ಉದ್ಯಾನವ ನಿರ್ಮಾಣ ಮಾಡಿರುವ ಕಾರ್ಯ ಶ್ಲಾಘನೀಯ ಎಂದರು ಹೇಳಿದರು.

ಈ ಸಂದರ್ಭದಲ್ಲಿ ಸಿಡಿಪಿಓ ಯಲ್ಲಪ್ಪ ಗದಾಡಿ, ಹೆಸ್ಕಂ ಅಧಿಕಾರಿ ಎಮ್ ಎಸ್ ನಾಗನ್ನವರ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ ಭಾರತಿ ಕೋಣಿ, ಪಿಎಸ್‍ಐ ಎಚ್ ವೈ ಬಾಲದಂಡಿ, ಅರಣ್ಯ ಇಲಾಖೆ ಸಿಬ್ಬಂದಿ ಮಹಾಂತೇಶ ಹಿರೇಮಠ, ಪುರಸಭೆಯ ಆರೋಗ್ಯ ನೀರಿಕ್ಷಕ ಚಿದಾನಂದ ಮುಗಳಖೋಡ, ಎಸ್‍ಎಸ್‍ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಶಾನೂರಕುಮಾರ ಗಾಣಿಗೇರ, ಪುರಸಭೆ ಸದಸ್ಯರಾದ ಶಿವು ಚಂಡಕಿ, ಚೆನ್ನಪ್ಪ ಅಥಣಿ, ಹಾಸ್ಟೆಲ್ ನಿಲಯಪಾಲಕ ನಾಗೇಶ ಕಾಪಶಿ, ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಸಾರ್ವಜನಿಕರು, ಹಾಸ್ಟೆಲ್ ವಿದ್ಯಾರ್ಥಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ