Breaking News
Home / Recent Posts / 2025-26ರ ವೇಳೆಗೆ ಭಾರತದಲ್ಲಿ ಶೇ 20% ರಷ್ಟು ಎಥೆನಾಲ್ ಮಿಶ್ರಣದ ಗುರಿ

2025-26ರ ವೇಳೆಗೆ ಭಾರತದಲ್ಲಿ ಶೇ 20% ರಷ್ಟು ಎಥೆನಾಲ್ ಮಿಶ್ರಣದ ಗುರಿ

Spread the love

 

ಮೂಡಲಗಿ: ಕರ್ನಾಟಕ ರಾಜ್ಯದಿಂದ ವಾರ್ಷಿಕ ಸುಮಾರು 144 ಕೋಟಿ ಲೀಟರ್‍ಗಳ ಅಂದಾಜು ಎಥೆನಾಲ್ ಸಾಮಥ್ರ್ಯದ ಉತ್ಪಾದನೆಗಾಗಿ 36 ಯೋಜನೆಗಳಿಗೆ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಬಡ್ಡಿ ರಿಯಾಯಿತಿ ಯೋಜನೆಯಡಿ 119.90 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ರಾಜ್ಯ ಸಚಿವ ರಾಮೇಶ್ವರ್ ತೇಲಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.
ರಾಜ್ಯಸಭೆಯ ಮುಂಗಾರು ಅಧಿವೇಶನದಲ್ಲಿ ಜೈವಿಕ ಇಂಧನಗಳ ಉತ್ಪಾದನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಜೈವಿಕ ಇಂಧನಗಳ ರಾಷ್ಟ್ರೀಯ ನೀತಿ-2018 ರ ಪ್ರಕಾರ, ದೇಶದಲ್ಲಿ ಜೈವಿಕ ಇಂಧನ ಉತ್ಪಾದನೆಯನ್ನು ಉತ್ತೇಜಿಸಲು, ಅವುಗಳನ್ನು ರಫ್ತು ಮಾಡಲು ಉದ್ದೇಶಿಸಿರುವ ಜೈವಿಕ ಇಂಧನಗಳ ಉತ್ಪಾದನೆಗೆ ಫೀಡ್‍ಸ್ಟಾಕ್ ಆಮದು ಮಾಡಿಕೊಳ್ಳಲು ಯಾವುದೇ ನಿಬರ್ಂಧವಿಲ್ಲದೆ ಅನುಮತಿಸಲಾಗಿದೆ.
ವಾಣಿಜ್ಯ ಗುಪ್ತಚರ ಮತ್ತು ಅಂಕಿಅಂಶಗಳ ಮಹಾನಿರ್ದೇಶನಾಲಯವು 2022-23 ರ ಹಣಕಾಸು ವರ್ಷದಲ್ಲಿ ಭಾರತೀಯ ವ್ಯಾಪಾರ ವರ್ಗೀಕರಣದ ಅಡಿಯಲ್ಲಿ 35,20,064 ಕೆಜಿ ಜೈವಿಕ ಡೀಸೆಲ್ ಮತ್ತು ಮಿಶ್ರಣವನ್ನು ಹಾರ್ಮೋನೈಸ್ಡ್ ಸಿಸ್ಟಮ್ ಕೋಡ್‍ಗಳನ್ನು ಆಧರಿಸಿ 3,82,60,000 ರಫ್ತು ಮಾಡಲಾಗಿದೆ. 2025-26ರ ವೇಳೆಗೆ ಭಾರತದಲ್ಲಿ ಶೇ 20% ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸಲು ಮಾರ್ಗದರ್ಶನ ನೀಡುತ್ತದೆ. ಎಥೆನಾಲ್ ಸರಬರಾಜು ವರ್ಷ 2021-22 ಕ್ಕೆ 10% ಎಥೆನಾಲ್ ಮಿಶ್ರಣದ ಗುರಿಯನ್ನು ಸಾಧಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಮಾಹಿತಿ ನೀಡಿದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ