Breaking News
Home / Recent Posts / ಪಾಲ್ನಾ ಯೋಜನೆಯ ಉದ್ದೇಶವು ಮಕ್ಕಳ ಪೌಷ್ಟಿಕಾಂಶ, ಆರೋಗ್ಯ ಮತ್ತು ಅರಿವಿನ ಬೆಳವಣಿಗೆಗೆ ಸುರಕ್ಷಿತ ವಾತಾವರಣ

ಪಾಲ್ನಾ ಯೋಜನೆಯ ಉದ್ದೇಶವು ಮಕ್ಕಳ ಪೌಷ್ಟಿಕಾಂಶ, ಆರೋಗ್ಯ ಮತ್ತು ಅರಿವಿನ ಬೆಳವಣಿಗೆಗೆ ಸುರಕ್ಷಿತ ವಾತಾವರಣ

Spread the love

ಮೂಡಲಗಿ: ಪಾಲ್ನಾ ಘಟಕವನ್ನು ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಸೇರಿಸಲಾಗಿದ್ದು, ಕೆಲಸ ಮಾಡುವ ಮಹಿಳೆಯರ ಮಕ್ಕಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ಡೇ-ಕೇರ್ ಸೌಲಭ್ಯಗಳನ್ನು ಒದಗಿಸಲು ಮಹಿಳೆಯರನ್ನು ಕೆಲಸದಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸಲು ದೇಶಾದ್ಯಂತ 2688 ಶಿಶುವಿಹಾರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 57128 ಫಲಾನುಭವಿಗಳು ಇದರ ಪ್ರಯೋಜನೆ ಪಡೆದಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಸ್ಮøತಿ ಇರಾನಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು.
ರಾಜ್ಯಸಭೆಯ ಮುಂಗಾರು ಅಧಿವೇಶನದಲ್ಲಿ ಪಾಲ್ನಾ ಯೋಜನೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 15 ನೇ ಹಣಕಾಸು ಆಯೋಗದ ಅವಧಿಯಲ್ಲಿ 2021-22 ರಿಂದ 2025-26 ರ ಅವಧಿಯಲ್ಲಿ ಅನುμÁ್ಠನಕ್ಕಾಗಿ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಬಲೀಕರಣಕ್ಕಾಗಿ ಅಂಬ್ರೆಲಾ ಸ್ಕೀಮ್ ಮಿಷನ್ ಶಕ್ತಿಯನ್ನು ಪ್ರಾರಂಭಿಸಿದೆ.
ಪಾಲ್ನಾ ಯೋಜನೆಯ ಉದ್ದೇಶವು ಮಕ್ಕಳ ಪೌಷ್ಟಿಕಾಂಶ, ಆರೋಗ್ಯ ಮತ್ತು ಅರಿವಿನ ಬೆಳವಣಿಗೆಗೆ ಸುರಕ್ಷಿತ ವಾತಾವರಣವನ್ನು ಒದಗಿಸುವ ಮೂಲಕ ದುಡಿಯುವ ಮಹಿಳೆಯರ ಮಕ್ಕಳಿಗೆ ಗುಣಮಟ್ಟದ ಡೇ-ಕೇರ್ ಸೌಲಭ್ಯಗಳು ತುರ್ತು ಅಗತ್ಯವನ್ನು ಪರಿಹರಿಸುವುದಾಗಿದೆ. ಇದರಿಂದಾಗಿ ಹೆಚ್ಚಿನ ಮಹಿಳೆಯರು ತಮ್ಮ ಸಂಘಟಿತ ಮತ್ತು ಅಸಂಘಟಿತ ವಲಯದಲ್ಲಿ ಎಲ್ಲಾ ಸಾಮಾಜಿಕ-ಆರ್ಥಿಕ ಗುಂಪುಗಳಲ್ಲಿ ಲಾಭದಾಯಕ ಉದ್ಯೋಗವನ್ನು ಪಡೆಯಲು ಅನುವು ಮಾಡಿಕೊಡುತ್ತದೆ.
ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಮಕ್ಕಳಿಗೆ ಉತ್ತಮ-ಗುಣಮಟ್ಟದ ಆರೈಕೆ ಮತ್ತು ಶಿಕ್ಷಣವನ್ನು ಒದಗಿಸಲು ಶಿಶುವಿಹಾರದ ಕಾರ್ಮಿಕರ ತರಬೇತಿ ಮತ್ತು ಸಾಮಥ್ರ್ಯವನ್ನು ಹೆಚ್ಚಿಸುವುದನ್ನು ಖಚಿತಪಡಿಸುತ್ತದೆ. ತರಬೇತಿಯು ಮಕ್ಕಳ ಆರೈಕೆ, ಆರೋಗ್ಯ-ಪ್ರಥಮ ಚಿಕಿತ್ಸೆ, ನೈರ್ಮಲ್ಯ ನಿರ್ವಹಣೆ. ಮಕ್ಕಳ ಸರ್ವತೋಮುಖ ಬೆಳವಣಿಗೆಯನ್ನು ಉತ್ತೇಜಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಲು ಅವರಲ್ಲಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಮಾಹಿತಿ ನೀಡಿದರು.

 


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ