Breaking News
Home / Recent Posts / ರಾಷ್ಟ್ರ ಮಟ್ಟದ ಅಟಲ್ ಲ್ಯಾಬ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಯಾದವಾಡ ಗ್ರಾಮದ ವಿದ್ಯಾರ್ಥಿಗಳು ಭಾಗಿಯಾರುವುದು ಹೆಮ್ಮೆಯ ಸಂಗತಿ – ಈರಣ್ಣ ಕಡಾಡಿ

ರಾಷ್ಟ್ರ ಮಟ್ಟದ ಅಟಲ್ ಲ್ಯಾಬ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಯಾದವಾಡ ಗ್ರಾಮದ ವಿದ್ಯಾರ್ಥಿಗಳು ಭಾಗಿಯಾರುವುದು ಹೆಮ್ಮೆಯ ಸಂಗತಿ – ಈರಣ್ಣ ಕಡಾಡಿ

Spread the love

ಮೂಡಲಗಿ: ಅನುಪಯೋಗಿ ಕೃಷಿ ಉಪಕರಣಗಳನ್ನು ಬಳಸಿ ನೆಲಗಡಲೆ (ಶೇಂಗಾ) ಕೊಯ್ಲು ಯಂತ್ರವನ್ನು ಕೇವಲ 240 ರೂಗಳಲ್ಲಿ ತಯಾರಿಸಿ ರಾಷ್ಟ್ರ ಮಟ್ಟದ ಅಟಲ್ ಲ್ಯಾಬ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗಿಯಾರುವುದು ಹೆಮ್ಮೆಯ ಸಂಗತಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ರವಿವಾರ ಜು-30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಆಯೋಜಿಸಿದ ರಾಷ್ಟ್ರ ಮಟ್ಟದ ಅಟಲ್ ಲ್ಯಾಬ್ ವಿಜ್ಞಾನ ವಸ್ತು ಪ್ರದರ್ಶನದ ಮಳಿಗೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಯಾದವಾಡ ಗ್ರಾಮದ ಜಿ.ಎನ್.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ 09 ನೇ ತರಗತಿ ವಿದ್ಯಾರ್ಥಿಗಳಾದ ಪವನ ಕೊಲ್ಲಾಪುರ ಮತ್ತು ಬಸವರಾಜ ಕೌಜಲಗಿ ಅವರಿಗೆ ಶುಭ ಹಾರೈಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಭಾರತ ಸರಕಾರದ ನೀತಿ ಆಯೋಗದಡಿಯಲ್ಲಿ ಬರುವ ಅಟಲ್ ಟಿಂಕರಿಂಗ್ ಲ್ಯಾಬ್ ಯೋಜನೆಯಡಿಯಲ್ಲಿ ಸಿ.ಜಿ.ಐ ಮತ್ತು ಲನಿರ್ಂಗ್ ಲಿಂಕ್ ಪೌಂಡೇಶನ ಸ್ವ ಸಹಾಯ ಸಂಸ್ಥೆಗಳು ಈ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಇವರ ಸ್ವಚಾಲಿತ ಯಂತ್ರವನ್ನು ರಾಷ್ಟ್ರ ಮಟ್ಟದಲ್ಲಿ ಗುರಿತಿಸಲು ದೆಹಲಿ ಪ್ರಗತಿ ಮೈದಾನದಲ್ಲಿ ನಡೆಯುವ ವಸ್ತು ಪ್ರದರ್ಶನಕ್ಕೆ ಕಳುಹಿಸಿ ಕೊಟ್ಟಿದೆ ಎಂದರಲ್ಲದೇ ನಮ್ಮ ಭಾಗದ ಮಕ್ಕಳ ಪ್ರತಿಭೆಯನ್ನು ದೆಹಲಿಯಲ್ಲಿ ಕಂಡು ಸಂತಸ ವ್ಯಕ್ತಪಡಿಸಿದರು.
ಕೇಂದ್ರ ಶಿಕ್ಷಣ ಇಲಾಖೆ ಸಚಿವ ಧಮೇರ್ಂದ್ರ ಪ್ರಧಾನ, ಕೇಂದ್ರ ಶಿಕ್ಷಣ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್, ಮಾರ್ಗದರ್ಶಕರಾದ ಎಸ್ ಎಸ್ ಬಳೂರಗಿ ಉಪಸ್ಥಿತರಿದ್ದರು.


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ