ಮೂಡಲಗಿ: ದೇಶದ 63,000 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಗಣಕೀಕರ ಕಾರ್ಯವನ್ನು 2,516 ಕೋಟಿ ರೂಪಾಯಿಗಳ ವೆಚ್ಚದೊಂದಿಗೆ ಪ್ರಾರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5,491 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ನವದೆಹಲಿಯಲ್ಲಿ ನಡೆಯುತ್ತಿರುವ ರಾಜ್ಯಸಭೆ ಮುಂಗಾರು ಅಧಿವೇಶನದಲ್ಲಿ ಸಹಕಾರ್ ಸೇ ಸಮೃದ್ಧಿ ಯೋಜನೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ದೇಶಾದ್ಯಂತ “ಸಹಕಾರ್ ಸೇ ಸಮೃದ್ಧಿ” ಯ ದೃಷ್ಟಿಕೋನವನ್ನು ಸಾಕಾರಗೊಳಿಸಲು, ಸಹಕಾರಿ ಕ್ಷೇತ್ರವನ್ನು ಬಲಪಡಿಸಲು ಮತ್ತು ಸಹಕಾರಿ ಸಂಘಗಳ ಪ್ರಾಬಲ್ಯವನ್ನು ಮರುಸ್ಥಾಪಿಸಲು ಸಹಕಾರ ಸಚಿವಾಲಯವು ವಿವಿಧ ಸಹಕಾರಿ ಉಪಕ್ರಮಗಳನ್ನು ತೆಗೆದುಕೊಂಡಿದೆ. ಮುಂದಿನ ಐದು ವರ್ಷಗಳಲ್ಲಿ 2 ಲಕ್ಷ ಹೊಸ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರ ಸಂಘ/ ಡೈರಿ/ಮೀನುಗಾರಿಕೆ ಸಹಕಾರ ಸಂಘಗಳನ್ನು ಪ್ರತಿ ಪಂಚಾಯತ್ ಗ್ರಾಮವನ್ನು ಒಳಗೊಂಡಂತೆ ಸ್ಥಾಪಿಸಲು ಯೋಜನೆಗೆ ಅನುಮೋದನೆ ನೀಡಲಾಗಿದೆ.
ಆಹಾರ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ವಿಕೇಂದ್ರೀಕೃತ ಧಾನ್ಯ ಸಂಗ್ರಹ ಯೋಜನೆಯ ಮೂಲಕ ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಮಟ್ಟದಲ್ಲಿ ಧಾನ್ಯ ಸಂಗ್ರಹಣೆಗಾಗಿ ಗೋಡೌನ್‍ಗಳ ನಿರ್ಮಾಣ ಮತ್ತು ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ಕರ್ನಾಟಕ ರಾಜ್ಯ ಸೇರಿದಂತೆ 24 ರಾಜ್ಯಗಳಲ್ಲಿ ಪ್ರಾಯೋಗಿಕ ಯೋಜನೆಯು ಅನುμÁ್ಠನದಲ್ಲಿದೆ.
17,000 ಕ್ಕೂ ಹೆಚ್ಚು ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಕಾರ್ಯಸಾಧ್ಯತೆಯನ್ನು ಸುಧಾರಿಸಲು, ಇ-ಸೇವೆ ಒದಗಿಸಲು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗವನ್ನು ಸೃಷ್ಠಿಸಲು ಸಾಮಾನ್ಯ ಸೇವಾ ಕೇಂದ್ರಗಳಾಗಿ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 559 ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಸಾಮಾನ್ಯ ಸೇವಾ ಕೇಂದ್ರಗಳಾಗಿ ಮಾಡಲಾಗಿದೆ. 1100 ಹೆಚ್ಚುವರಿ ಹೊಸ ರೈತ ಉತ್ಪಾದಕ ಸಂಸ್ಥೆಗಳನ್ನು ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಮುಖಾಂತರ ರಚಿಸಲಾಗುವುದು
ಸಗಟು ಪೆಟ್ರೋಲ್/ಡೀಸೆಲ್ ಔಟ್‍ಲೆಟ್‍ಗಳ ಹಂಚಿಕೆಗಾಗಿ ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಸಂಯೋಜಿತ ವರ್ಗ 2ರಲ್ಲಿ ಸೇರಿಸಲಾಗಿದೆ. ಸಗಟು ಪೆಟ್ರೋಲ್ ಪಂಪ್ ಪರವಾನಗಿಯೊಂದಿಗೆ ಅಸ್ತಿತ್ವದಲ್ಲಿರುವ ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಚಿಲ್ಲರೆ ಮಾರಾಟ ಮಳಿಗೆಗಳಾಗಿ ಪರಿವರ್ತಿಸಲು ಅನುಮತಿಸಲಾಗಿದೆ.
ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿಗೆ ಹೆಚ್ಚುವರಿ ಆದಾಯ ಮೂಲವನ್ನು ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ನಿರ್ವಹಿಸಲು ಅನುಮತಿಸಲಾಗಿದೆ. ದೇಶದಲ್ಲಿ ರೈತರಿಗೆ ರಸಗೊಬ್ಬರ ಮತ್ತು ಸಂಬಂಧಿತ ಸೇವೆಗಳು ಸುಲಭವಾಗಿ ಲಭ್ಯವಾಗಲು ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ನಿರ್ವಹಿಸಲು ಪ್ರಾಥಮಿಕ ಕೃಷಿ ಸಹಕಾರ ಸಂಘಗಳಿಗೆ ಅನುಮತಿಸಲಾಗಿದೆ.
1 ಕೋಟಿಯಿಂದ 10 ಕೋಟಿ ರೂ.ವರೆಗಿನ ಆದಾಯ ಹೊಂದಿರುವ ಸಹಕಾರ ಸಂಘಗಳ ಮೇಲಿನ ಸರ್ಚಾರ್ಜ್ ಅನ್ನು ಶೇ.12ರಿಂದ ಶೇ.7ಕ್ಕೆ ಇಳಿಸಲಾಗಿದೆ. ಸಹಕಾರ ಸಂಘಗಳ ಕನಿಷ್ಠ ವೇತನ ತೆರಿಗೆ ದರವನ್ನು (ಎಂಎಟಿ) ಶೇ.18.5ರಿಂದ ಶೇ.15ಕ್ಕೆ ಇಳಿಸಲಾಗಿದೆ. ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 269 ಎಸ್ ಟಿ ಅಡಿಯಲ್ಲಿ ಸಹಕಾರಿ ಸಂಘಗಳು ನಗದು ವ್ಯವಹಾರದಲ್ಲಿನ ಅಡೆತಡೆಗಳನ್ನು ತೆಗೆದುಹಾಕಲು ಅಧಿಸೂಚನೆ ಹೊರಡಿಸಲಾಗಿದೆ. ಪಿಂಚಣಿ ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಅಭಿವೃದ್ಧಿ ಬ್ಯಾಂಕುಗಳ ನಗದು ಠೇವಣಿ ಮತ್ತು ಸಾಲದ ಮಿತಿಯನ್ನು 20,000 ರೂ.ಗಳಿಂದ 2 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಸಹಕಾರಿ ಸಂಘಗಳಿಗೆ, ತೆರಿಗೆ ಕಡಿತ (ಟಿಡಿಎಸ್) ಇಲ್ಲದೆ ನಗದು ಹಿಂಪಡೆಯುವ ಮಿತಿಯನ್ನು 1 ಕೋಟಿ ರೂ.ಗಳಿಂದ 3 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಮಾಹಿತಿ ನೀಡಿದರು.
Check Also
ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ
Spread the loveಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ. ಮೂಡಲಗಿ : ಬ್ಯಾಂಕಿನ ಆರ್ಥಿಕ ಸಾಕ್ಷರತೆ …