ಮೂಡಲಗಿ : ಇಂದಿನಿಂದ ಆರಂಭವಾಗಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಆತಂಕಗೊಳ್ಳದೇ ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಉತ್ತಮ ಸಾಧನೆಗೈಯ್ಯುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರಿಂದು ಮೂಡಲಗಿ, ನಾಗನೂರ, ಕಲ್ಲೋಳಿ ಪಟ್ಟಣಗಳ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದ ಅವರು, ಮೂಡಲಗಿ ವಲಯವು ಮತ್ತೊಮ್ಮೆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಆಶಿಸಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಮೂಡಲಗಿ ಶೈಕ್ಷಣಿಕ ವಲಯ ಉತ್ತಮ ಕ್ರಮ ಕೈಗೊಂಡಿದೆ. ಇದಕ್ಕಾಗಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಾಸ್ಕ್ ಹಾಗೂ ಸ್ಯಾನಿಟೈಜರ್‍ನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಕಡ್ಡಾಯ ಮಾಸ್ಕ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿ ಸಮುದಾಯಕ್ಕೆ ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು, ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ರಾಜ್ಯದಲ್ಲಿಯೇ ವಲಯದ ಕೀರ್ತಿ ತರುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದ್ದಾರೆ ಎಂದು ಹೇಳಿದರು.
ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …