ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ ಕೀರ್ತಿ ಹೆಚ್ಚಿಸಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸೋಮವಾರ ಅ. 02ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಾರ್ಯಾಲಯದಲ್ಲಿ ಹುಣಶ್ಯಾಳ ಪಿಜಿ ಗ್ರಾಮದ ವಿದ್ಯಾರ್ಥಿಗಳಾದ ಅನುಕ್ತ ಮದುರಿ ಮತ್ತು ರಾಜಗುರು ವಾಣಿ ಇವರು ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರಯುಕ್ತ ವಿಧ್ಯಾರ್ಥಿಗಳನ್ನು ಸನ್ಮಾನಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಿದ್ದಾರ್ಥ ಅಥಣಿ, ಬಸವರಾಜ ಗಾಡವಿ, ಈಶ್ವರ ಗಾಡವಿ, ಸಿದ್ದಪ್ಪ ವಾಣಿ, ಮುತ್ತೆಪ್ಪ ವಾಣಿ, ಗುರು ಕಮತೆ, ಮಹಾಂತೇಶ ರೊಡ್ಡನ್ನವರ, ಶಿಕ್ಷಕರಾದ ಬಾಳು ನಾಂವಿ, ಶಿವು ಸುಣಗಾರ ಉಪಸ್ಥಿತರಿದ್ದರು.
IN MUDALGI Latest Kannada News