Breaking News
Home / Recent Posts / ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

Spread the love

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

ಘಟಪ್ರಭಾ: ದೀಪಾವಳಿ ಹಬ್ಬದ ನಿಮಿತ್ಯ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ನ-10 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಯವರಗೆ (ಒಂದು ಮಾರ್ಗ) ಹಾಗೂ ನ-14 ರಂದು ಬೆಳಗಾವಿಯಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ (ಒಂದು ಮಾರ್ಗ) ವಿಶೇಷ ಎಕ್ಸ್‍ಪ್ರೆಸ್ ರೈಲು ಬಿಡಲು ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ ಆದೇಶಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು
ಶನಿವಾರ ನ-04ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ದಿನಾಂಕ 04-11-2023 ರಂದು ಬೆಳಗ್ಗೆ ವಿಶೇಷ ರೈಲಿನ ಬುಕಿಂಗ್ 8 ಗಂಟೆಗೆ ಪ್ರಾರಂಭ ಮಾಡಿದ್ದು ಬೆಳಿಗ್ಗೆ 10.30 ಕ್ಕೆ ಸುಮಾರು 550 ಸ್ಲೀಪರ್ ಕ್ಲಾಸ್ ಹಾಗೂ 20 ಎಸಿ ಟಿಕೇಟ್ ಬುಕ್ ಆಗಿದ್ದು ತುಂಬಾ ಖುಷಿ ಸಂಗತಿ ಎಂದರು.
ರೈಲಿನ ಸಮಯ ಈ ಕೆಳಗಿನಂತಿದೆ.
ದಿನಾಂಕ: 10-11-2023ರಂದು ವಿಶೇಷ ರೈಲು (ಒಂದು ಮಾರ್ಗ) ರೈಲು ಸಂಖ್ಯೆ 06585 ರಾತ್ರಿ 08:00 ಗೆ ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣದಿಂದ ಹೊರಟು ಮರುದಿನ ಬೆಳಿಗ್ಗೆ 08:00 ಗಂಟೆಗೆ ಬೆಳಗಾವಿಗೆ ತಲುಪುವುದು.
ದಿನಾಂಕ:14-11-2023 ರಂದು ವಿಶೇಷ ರೈಲು ಒಂದು ಮಾರ್ಗ ರೈಲು ಸಂಖ್ಯೆ 06586 ಸಂಜೆ 06:50ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 06:00ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣಕ್ಕೆ ತಲುಪುವುದು. ಪ್ರಯಾಣಿಕರು ಇದರ ಸದುಪಯೋಗವನ್ನ ಪಡೆದುಕೊಳ್ಳಬೇಕು, ನನ್ನ ಮನವಿಗೆ ಸ್ಪಂದಿಸಿ ಶೀಘ್ರ ರೈಲಿನ ವ್ಯವಸ್ಥೆ ಮಾಡಿದ ರೈಲ್ವೆ ಮಹಾಪ್ರಭಂಧಕರಿಗೆ ಧನ್ಯವಾದಗಳನ್ನು ತಿಳಿಸಿದರು.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ