Breaking News
Home / Recent Posts / ಶ್ರೀ ಮಡ್ಡಿ ವೀರಭದ್ರೇಶ್ವರ ಮಹಾದ್ವಾರದ ಉದ್ಘಾಟನಾ ಸಮಾರಂಭವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.

ಶ್ರೀ ಮಡ್ಡಿ ವೀರಭದ್ರೇಶ್ವರ ಮಹಾದ್ವಾರದ ಉದ್ಘಾಟನಾ ಸಮಾರಂಭವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.

Spread the love

ಚುನಾವಣೆ ಫಲಿತಾಂಶಕ್ಕೆ ತಲೆ ಕೆಡಿಸಿಕೊಳ್ಳದೆ ಪಂಚ ಗ್ಯಾರಂಟಿ ಮುಂದುವರಿಕೆ: ಲಕ್ಷ್ಮೀ ಹೆಬ್ಬಾಳಕರ್

ಮೂಡಲಗಿ : ರಾಜ್ಯದ ನಮ್ಮ ಕಾಂಗ್ರೆಸ್ ಸರಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಚುನಾವಣೆಯ ಫಲಿತಾಂಶಕ್ಕೂ ತಲೆಕೆಡಿಸಿಕೊಳ್ಳದೆ ಜನರಿಗೋಸ್ಕರ ತಂದಿರುವ ಐದೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದೆ ಮುಂದುವರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅವರು ಮಂಗಳವಾರದಂದು ಪಟ್ಟಣದ ಈರಣ್ಣ ನಗರದ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಾಜಗೋಪುರದ ಕಳಸಾರೋಹಣ, ಮಹಾದ್ವಾರದ ಉದ್ಘಾಟನೆ ಹಾಗೂ ರಥೋತ್ಸವದ ನಿಮಿತ್ಯ ನಡೆದ ಸತ್ಸಂಗ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಲೋಕಸಭೆ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳು ನಿಲ್ಲಲಿವೆ ಎನ್ನುವ ವಿರೋಧಿಗಳ ಅಪಪ್ರಚಾರದ ಹಿನ್ನೆಲೆಯಲ್ಲಿ, ಸಚಿವರು ಈ ವಿಷಯ ಸ್ಪಷ್ಟಪಡಿಸಿದರು. ಪಂಚ ಗ್ಯಾರಂಟಿ ಯೋಜನೆಗಳು ಜನರಿಗಾಗಿ ತಂದಿರುವ ಯೋಜನೆಗಳು. ಅವುಗಳನ್ನು ಜನರಿಗೋಸ್ಕರು ಮುಂದುವರಿಸಲಾಗಿದೆ. ಚುನಾವಣೆ ಫಲಿತಾಂಶಕ್ಕೂ ಇದಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ ಸರಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ ಎನ್ನುವುದನ್ನು ಸಚಿವರು ಸ್ಪಷ್ಟಪಡಿಸಿದರು.
ಗುಡಿ, ಗಂಡಾರಗಳ ವೈಭವ ನೋಡುವುದಾದರೆ ಅರಬಾವಿ ಕ್ಷೇತ್ರದಲ್ಲಿ ನೋಡಬೇಕು. ಅಷ್ಟು ಚೆನ್ನಾಗಿ ಇಲ್ಲಿನ ದೇವಸ್ಥಾನಗಳು, ಮಹಾಧ್ವಾರಗಳು ನಿರ್ಮಾಣವಾಗಿವೆ ಎಂದ ಸಚಿವರು, ಇಲ್ಲಿನ ಜನರು ಯಾವ ಶಾಸಕರು, ಸಂಸದರು ದುಡ್ಡು ಕೊಡುತ್ತಾರೆ ಎಂದು ಕಾಯುವುದಿಲ್ಲ. ತಾವೇ ಕಿಸೆಯಿಂದ ದುಡ್ಡು ಹಾಕಿ ಗುಡಿ ಗುಂಡಾರ ಕಟ್ಟುತ್ತಾರೆ. ಅಷ್ಟು ದೊಡ್ಡ ಮನಸ್ಸಿರುವ ಜನರು ಇಲ್ಲಿನವರು ಎಂದು ಪ್ರಶಂಸಿಸಿದರು.
ಭಾರತ 5 ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಅತ್ಯಂತ ಶ್ರೀಮಂತ ಇತಿಹಾಸ ನಮ್ಮದು. ದೇಶದ ಹಳ್ಳಿ ಹಳ್ಳಿಗಳಲ್ಲಿ, ಗಲ್ಲಿಗಲ್ಲಿಗಳಲ್ಲಿ ಇರುವ ನಮ್ಮ ಸಂಸ್ಕøತಿ ಇದಕ್ಕೆ ಕಾರಣ. ನಮ್ಮ ಮನೆಯಲ್ಲಿ ಬಂಗಾರವಿಲ್ಲದಿದ್ದರೂ ದೇವರ ಕಳಶಕ್ಕೆ ಬಂಗಾರ ಹಾಕುತ್ತೇವೆ. ಅಂತಹ ಭಕ್ತಿ ನಮ್ಮದು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಈ ವರ್ಷ ದೇವರ ಆಶಿರ್ವಾದದಿಂದ ಮಳೆ, ಬೆಳೆ ಚೆನ್ನಾಗಿ ಆಗಿದೆ. ದೇವರ ಆಶಿರ್ವಾದ ನಿಮ್ಮ ಮೇಲಿರಲಿ. ಸಂತೃಪ್ತಿಯ ಜೀವನ ಎಲ್ಲರದ್ದಾಗಲಿ ಎಂದು ಆಶಿಸಿದ ಸಚಿವರು, ಸೆ.3ರಂದು ವೀರಭದ್ರೇಶ್ವರ ಜಯಂತಿ. ಅಂದು ಎಲ್ಲರೂ ಜಯಂತಿಯನ್ನು ಆಚರಣೆ ಮಾಡಬೇಕು ಎಂದರು.
ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಕಂಕಣವಾಡಿಯ ಮಾರುತಿ ಶರಣರು, ಬೆಳಗಲಿಯ ಸಿದ್ದರಾಮ ಶಿವಯೋಗಿ ಶ್ರೀಗಳು ಆಶೀರ್ವಚನ ನೀಡಿದರು.
ಶ್ರೀ ಮಡ್ಡಿ ವೀರಭದ್ರೇಶ್ವರ ದೇವಸ್ಥಾನದ ಅಧ್ಯಕ್ಷ ಭೀಮಪ್ಪ ಹಂದಿಗುಂದ ಅಧ್ಯಕ್ಷತೆ ವಹಿಸಿದ್ದರು
ಸಮಾರಂಭದ ವೇದಿಕೆಯಲ್ಲಿ ಮುಖಂಡರಾದ ಅಶೋಕ ಪೂಜಾರಿ, ಡಾ. ಮಹಾಂತೇಶ ಕಡಾಡಿ, ಭೀಮಪ್ಪ ಗಡಾದ, ಬಿ.ಬಿ.ಬೆಳಕೂಡ, ಲಗಮಣ್ಣ ಕಳಸಣ್ಣವರ, ರಾವಸಾಬ್ ಬೆಳಕೂಡ, ನಿಂಗಪ್ಪ ಪಿರೋಜಿ, ದೇವಸ್ಥಾನದ ಕಮೀಟಿಯ ಉಪಾಧ್ಯಕ್ಷ ರಾಮಪ್ಪ ಸೋನವಾಲಕರ, ಕಾರ್ಯದರ್ಶಿ ಮಲ್ಲಪ್ಪ ಗಾಣಿಗೇರ್ ಹಾಗೂ ದೇವಸ್ಥಾನ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.


Spread the love

About inmudalgi

Check Also

ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ಸಲ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯುವುದೇ.?

Spread the loveಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ಸಲ ಸಂಘದ ಆಡಳಿತ ಮಂಡಳಿ ಸದಸ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ