Breaking News
Home / Recent Posts / ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ – ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ – ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ

Spread the love

ಮೂಡಲಗಿ: ಮೂರೂವರೆ ವರ್ಷದಿಂದ ಮೀಸಲಾತಿಗಾಗಿ ನಿರಂತರ ಹೋರಾಟ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಆದ್ದರಿಂದ 7ನೇ ಹಂತದ ಹೋರಾಟ ಆರಂಭಿಸಿದ್ದೇವೆ. ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ಸೆ. 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಮಂಗಳವಾರದಂದು ಪಟ್ಟಣದ ಲಕ್ಮೀನಗರದ ನೇಗಿಲಯೋಗಿ ಫಾರ್ಮ್ ಹೌಸ್‍ದ್ದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹೋರಾಟದಲ್ಲಿ ಶಾಸಕಾಂಗವೂ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಕಾನೂನಾತ್ಮಕ ಬೆಂಬಲ ಪಡೆಯಲು ವಕೀಲರ ಸಂಘಟನೆ ಮಾಡುತ್ತಿದ್ದೇವೆ. ಈಗಾಗಲೇ ಎಲ್ಲ ಕಡೆ ನೂತನ ಜಿಲ್ಲಾ ಘಟಕಗಳನ್ನು ಮಾಡಲಾಗುತ್ತಿದ್ದು, ಹಿರಿಯ ವಕೀಲರನ್ನು ಸಲಹಾ ಸಮಿತಿಗೆ ಆಯ್ಕೆ ಮಾಡಿದ್ದೇವೆ. ಬೆಳಗಾವಿ ಸಮಾವೇಶದಲ್ಲಿ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಸುಮಾರು ಐದು ಸಾವಿರ ವಕೀಲರು ಪಾಲ್ಗೊಳ್ಳಲಿದ್ದಾರೆ. ಅಂದು ಕೆಲ ಕಠಿಣ ನಿರ್ಣಯಗಳನ್ನು ಅಂಗೀಕರಿಸುತ್ತೇವೆ. ವಕೀಲರ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ ಎಂದರು.
ಅಧಿಕಾರಕ್ಕೆ ಬಂದ ಮೇಲೆ ನಮ್ಮ ಸಮಾಜದ ಶಾಸಕರು ಮಾತನಾಡುತ್ತಿಲ್ಲ. ಹೀಗಾಗಿ ಶಾಸಕರಿಗೆ ಪತ್ರ ಕೊಟ್ಟು ಚಳವಳಿ ಮಾಡಿದ್ದೇವೆ. ಆದರೂ ಶಾಸಕರು ಧ್ವನಿ ಎತ್ತುತ್ತಿಲ್ಲ. ಅವರಲ್ಲಿ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದ ಅವರು, ಸೆ.22ರಂದು ಸಮಾಜದ ಎಲ್ಲ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಸಂಘಟನೆಯ ಜಿಲ್ಲಾ ಕಾರ್ಯಧ್ಯಕ್ಷ ನಿಂಗಪ್ಪ ಪಿರೋಜಿ, ವಕೀಲರಾದ ಆರ್ ಆರ್ ಭಾಗೋಜಿ, ಅನೀಲ ಕೌಜಲಗಿ, ಎಸ್ ಎಸ್ ತುಪ್ಪದ, ಮುಖಂಡರಾದ ಸಂಗಮೇಶ ಕೌಜಲಗಿ, ಬಿ ಬಿ ಹಂದಿಗುಂದ, ಶೇಖರ ತೇಲಿ, ಹೊಳಪ್ಪ ಶಿವಾಪೂರ ಉಪಸ್ಥಿತಿರಿದ್ದರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ