Breaking News
Home / Recent Posts / ಕಾರ್ಮಿಕ ಇಲಾಖೆಯಲ್ಲಿ ಹೆಸರುನ್ನು ನೋಂದಾಯಿಸಿ ಗುರುತಿನ ಚೀಟಿ ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯ

ಕಾರ್ಮಿಕ ಇಲಾಖೆಯಲ್ಲಿ ಹೆಸರುನ್ನು ನೋಂದಾಯಿಸಿ ಗುರುತಿನ ಚೀಟಿ ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯ

Spread the love

ಮೂಡಲಗಿ: ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.
ಶುಕ್ರವಾರದಂದು ಪಟ್ಟಣದ ತಹಶೀಲ್ದಾರರ ಕಚೇರಿ ಬಳಿ ಕಾರ್ಮಿಕ ಇಲಾಖೆಯಿಂದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು, ಕಾರ್ಮಿಕರ ಏಳ್ಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಅವರು ತಿಳಿಸಿದರು.
ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಕಟ್ಟಡಗಳಿಗೆ ಅಗತ್ಯವಿರುವ ವಿವಿಧ ವಿಭಾಗಗಳಿಗೆ ಸೇರಿರುವ ಕಾರ್ಮಿಕರು ಈ ಸೌಲಭ್ಯಗಳಿಗೆ ಅರ್ಹರಾಗಿದ್ದಾರೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು 3 ಸಾವಿರ ರೂಪಾಯಿ ವೇತನ ನೀಡುತ್ತಿದೆ. ಕಟ್ಟಡ ಕಾಮಗಾರಿ ನಡೆಯುವ ವೇಳೆ ಕಾರ್ಮಿಕರು ಮೃತಪಟ್ಟರೆ ಅಂತಹವರಿಗೆ ರೂಪಾಯಿ 5 ಲಕ್ಷ ವರೆಗೆ ವಿಮಾ ಸೌಲಭ್ಯವಿದೆ. ಸುಮಾರು 2 ಲಕ್ಷ ರೂಪಾಯಿವರೆಗಿನ ಆರೋಗ್ಯದ ವೆಚ್ಚವನ್ನು ಇಲಾಖೆಯೇ ಭರಿಸಲಿದೆ. ಕಟ್ಟಡ ನಿರ್ಮಾಣ ಮಾಡುವ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿ ಗುರುತಿನ ಚೀಟಿಗಳನ್ನು ಪಡೆದರೆ ಮಾತ್ರ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು 2023-24 ನೇ ಸಾಲಿನ ಕಾರ್ಮಿಕರಿಗೆ 1200 ಕಿಟ್ ಗಳನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಿಕ ಅಶೋಕ ವಡ್ಡರ, ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾನ ಕಾರ್ಮಿಕರ ಸಂಘದ ಕಾರ್ಯದರ್ಶಿ ಸುಭಾಸ ಗೋಡ್ಯಾಗೋಳ, ಹಣಮಂತ ಗುಡ್ಲಮನಿ, ಅನ್ವರ ನದಾಫ, ಜೈ ಭವಾನಿ ಕಾರ್ಮಿಕ ಸಂಘದ ಅಧ್ಯಕ್ಷ ರಮೇಶ ದುಮಾಳಿ. ಕಾರ್ಮಿಕ ಇಲಾಖೆ ಸಿಬಂದಿ ಈರಪ್ಪ ಮಾಲೋಜಿ, ರಾಜು ಪೂಜೇರಿ ಮತ್ತು ಪುರಸಭೆ ಸದಸ್ಯರು, ಕಾರ್ಮಿಕರು ಉಪಸ್ಥಿತರಿದ್ದರು.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ