Breaking News
Home / Recent Posts / ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ಎಸ್.ಸಿ/ಎಸ್.ಟಿ ಹಾಗೂ ಅಲ್ಪ ಅಲ್ಪಸಂಖ್ಯಾತರ ಶಾಖಾ ಘಟಕ ಉದ್ಘಾಟನೆ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ಎಸ್.ಸಿ/ಎಸ್.ಟಿ ಹಾಗೂ ಅಲ್ಪ ಅಲ್ಪಸಂಖ್ಯಾತರ ಶಾಖಾ ಘಟಕ ಉದ್ಘಾಟನೆ

Spread the love

ಮೂಡಲಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಯು ಸಮಜದಲ್ಲಿ ಹಿಂದುಳಿದ ಜನರಿಗೆ ಸರಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದು, ಮೂಡಲಗಿಯಲ್ಲಿ ನೂತನವಾಗಿ ಆರಂಭಗೊಂಡ ಸಂಘಟನೆಯ ಪದಾಧಿಕಾರಿಗಳು ತಮ್ಮ ಸುತ್ತಮುತ್ತಲಿನ ಬಡವರ ಏಳ್ಗೆಗಾಗಿ ಶ್ರಮೀಶಬೇಕೆಂದು ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸತ್ತೇಪ್ಪ ಕರವಾಡೆ ಹೇಳಿದರು.
ಶನಿವಾರದಂದು ಪಟ್ಟಣದ ಎಪಿಎಂಸಿ ಆವರಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಮೂಡಲಗಿ ತಾಲೂಕಾ ಎಸ್.ಸಿ/ಎಸ್.ಟಿ ಹಾಗೂ ಅಲ್ಪ ಅಲ್ಪಸಂಖ್ಯಾತರ ಶಾಖಾ ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಆಯೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಇನ್ನೋರ್ವ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಎಸ್.ಮಾದರ ಮಾತನಾಡಿ, ಸಂಘಟನೆಯ ತಾಲೂಕಿನ ಪದಾಧೀಕಾರಿಗಳು ಸಂಘಟನೆಯ ಹೆಸರನ್ನು ದೂರಪಯೋಗ ಪಡಿಸಿಕೊಳ್ಳದೆ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಕಾರ್ಯ ಕೈಗೊಳ್ಳಬೇಕೆಂದರು.
ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ, ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಮಾತನಾಡಿದರು.
ಸಮುದಾಯ ಆರೋಗ್ಯಾಧಿಕಾರಿ ಡಾ.ಭಾರತಿ ಕೋಣಿ, ಅಲ್ಪಸಂಖ್ಯಾತರ ರಾಜ್ಯ ಸಂಘಟನಾ ಸಂಚಾಲಕ ರಫೀಕ ಬೋಕರೆ, ಜಿಲ್ಲಾ ಸಂಚಾಲಕ ಪರಶುರಾಮ ವಂಟಮುರಿ, ಜಿಲ್ಲಾ ಸಂಚಾಲಕಿ ಸುನಂದಾ ಭಜಂತ್ರಿ, ಲಾಲಸಾಬ ಸೈಯದ, ಜಿಲ್ಲಾ ಅಲ್ಪಸಂಖ್ಯಾತ ಸಂಚಾಲಕ ರಮಜಾನ ಬಿಜಾಪೂರ, ತಾಲೂಕಾ ಅಲ್ಪಸಂಖ್ಯಾತ ಸಂಚಾಲಕ ಸೈಯದ ಮಂಟೂರ, ತಾಲೂಕಾ ಅಲ್ಪಸಂಖ್ಯಾತ ಕಾರ್ಯದರ್ಶಿ ಹಸನಸಾಬ ಮುಗಟಖಾನ, ಖಜಾಂಚಿ ಮೈಬೂಬ ಜಮಾದಾರ, ಸಂಘಟನಾ ಸಂಚಾಲಕ ಉಸ್ಮಾನ ಮದಭಾವಿ, ಯಲ್ಲಪ್ಪ ಬಾಳವಗೋಳ,  ಚುಟುಕುಸಾಬ ಮಂಟೂರ, ಮದಾರ ಜಕಾತಿ, ಅದಮ ಗಾಡೆಕಾರ, ಶಮ್ಮಶೂದಿನ ಮುಲ್ಲಾ, ಅಬ್ದುಲ ಜಮಾದಾರ ಮತ್ತಿತರರು ಉಪಸ್ಥಿತರಿದ್ದರು.


Spread the love

About inmudalgi

Check Also

ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ

Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ