Breaking News
Home / ಬೆಳಗಾವಿ / “ವಕ್ಫ್ ಕಾಯ್ದೆಯ ದುರ್ಬಳಕೆ ಖಂಡಿಸಿ ರಾಜ್ಯಪಾಲರಿಗೆ ಮನವಿ”

“ವಕ್ಫ್ ಕಾಯ್ದೆಯ ದುರ್ಬಳಕೆ ಖಂಡಿಸಿ ರಾಜ್ಯಪಾಲರಿಗೆ ಮನವಿ”

Spread the love

ಮೂಡಲಗಿ : ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯ ಸರಕಾರ, ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು, ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಈರಣ್ಣ ಅಂಗಡಿ ಹೇಳಿದರು.

ಸೋಮವಾರದಂದು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ಶ್ರೀ ನರೇಂದ್ರ ಮೋದಿ ನೇತೃತ್ವದ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್ ಪರಿಶೀಲನೆಯಲ್ಲಿದೆ ಎಂದರು.
ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಮಾತನಾಡಿ, ವಕ್ಫ್ ಕಾಯ್ದೆಗೆ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಸ್ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈಹಾಕಿದೆ. ಅದರಲ್ಲೂ ರಾಜ್ಯದಲ್ಲಿ ನಡೆಯುತ್ತಿರುವ ಇಂತಹ ಎಲ್ಲಾ ಕುಕೃತ್ಯಗಳಿಗೂ ಕಾಂಗ್ರೆಸ್ ಸರಕಾರ ಹಾಗೂ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿರುವುದು ಇಡೀ ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ ಎಂದು ಕಳಕಳಿ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುರು ಹಿರೇಮಠ ಹಾಗೂ ಬಿಜೆಪಿ ಅರಭಾವಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಮಾತನಾಡಿ, ಯಾವುದೇ ಕಾರಣಕ್ಕೂ ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಸರಕಾರ ಕೈಗೊಳ್ಳುವ ಮತ್ತು ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಹಿಂದೂ ವಿರೋಧಿ ನಿರ್ಧಾರಗಳನ್ನು ಕೈಗೊಳ್ಳುವ ತನ್ನ ಹಳೇ ಚಾಳಿಯನ್ನ ಕೈಬಿಡಬೇಕು, ಶ್ರೀ ಸಿದ್ದರಾಮಯ್ಯನವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಸ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿಯು ಈ ತಂತ್ರಗಾರಿಕೆಯನ್ನು ಒಪ್ಪುವುದಿಲ್ಲ. ಈ ರೀತಿಯ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸರಕಾರ ಮುಂದುವರೆಸಿದಲ್ಲಿ, ಬಿಜೆಪಿಯು ಇಡೀ ರಾಜ್ಯದಲ್ಲಿ ಜನತೆಯನ್ನು ಒಗ್ಗೂಡಿಸಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಮನವಿ ಮೂಲಕ ವ್ಯಕ್ತ ಪಡಿಸುತ್ತೇವೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಬಿಜೆಪಿ ಅರಭಾವಿ ಮಂಡಲ ಪದಾಧಿಕಾರಿಗಳಾದ ಪಾಂಡು ಮಹೇಂದ್ರಕರ್, ಕೇದಾರಿ ಭಸ್ಮೆ, ತಿಪ್ಪಣ್ಣ ಕುರುಬಗಟ್ಟಿ, ಜಗದೀಶ್ ತೇಲಿ,ಕುಮಾರ್ ಗಿರಡ್ಡಿ, ಮಲ್ಲು ಯಾದವಾಡ, ಹನಮಂತ ಸತರಡಿ,್ಡ ಡಾ.ಬಸವರಾಜ್ ಫಾಲಭಾವಿ, ಸಿದ್ದಣ್ಣ ದುರದುಂಡಿ, ಯಲ್ಲಾಲಿಂಗ್ ವಾಳದ, ಬಸವರಾಜ ಶೇಕ್ಕಿ, ಪರಪ್ಪ ಹಡಪದ, ಚೇತನ್ ನಿಶಾನಿಮಠ, ಯಮನಪ್ಪ ಮೇತ್ರಿ, ಈಶ್ವರ್ ಮುರಗೋಡ, ಮಹಾಲಿಂಗ್ ಒಂಟಗೋಡಿ, ಶ್ರೀಶೈಲ್ ಶೇಕ್ಕಿ ಸೇರಿದಂತೆ ಅನೇಕ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About inmudalgi

Check Also

ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ

Spread the love ಬೆಟಗೇರಿ ವಿವಿಧೆಡೆ ಸಂಭ್ರಮದಿಂದ ನಡೆದ 76 ನೇ ಗಣರಾಜ್ಯೋತ್ಸವ ದಿನಾಚರಣೆ ಬೆಟಗೇರಿ :ಗೋಕಾಕ ತಾಲೂಕಿನ ಬೆಟಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ