Breaking News
Home / ಬೆಳಗಾವಿ / ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲಗಳನ್ನು ಮಂಜೂರು

ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲಗಳನ್ನು ಮಂಜೂರು

Spread the love

ಮೂಡಲಗಿ: ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 375 ಎಸ್.ಸಿ, 189 ಎಸ್.ಟಿ ಮತ್ತು 2,351 ಒಬಿಸಿ ಫಲಾನುಭವಿಗಳ 5,177 ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲಗಳನ್ನು ಮಂಜೂರು ಮಾಡಲಾಗಿದೆ ಮತ್ತು ಸುಮಾರು 21,852 ನೇರ/ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ರವನೀತ್ ಸಿಂಗ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಆಹಾರ ಸಂಸ್ಕರಣಾ ಘಟಕಗಳ ಯೋಜನೆಯ ಅನುಷ್ಠಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯನ್ನು ದೇಶದಲ್ಲಿನ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಉನ್ನತೀಕರಣಕ್ಕಾಗಿ ಆರ್ಥಿಕ, ತಾಂತ್ರಿಕ ಮತ್ತು ವಾಣಿಜ್ಯ ಸಹಾಯವನ್ನು ಒದಗಿಸಲು ಜಾರಿಗೊಳಿಸುತ್ತಿದೆ. ಈ ಯೋಜನೆಯು 2020-21 ರಿಂದ 2025-26 ರವರೆಗೆ 10,000 ಕೋಟಿ ರೂ. ಅನುದಾನ ನೀಡಲಾಗಿದೆ.

ದೇಶದಲ್ಲಿ 9,298 ಎಸ್.ಸಿ, 5,201 ಎಸ್.ಟಿ ಮತ್ತು 56,540 ಒಬಿಸಿ ಫಲಾನುಭವಿಗಳಿಗೆ 1,08,580 ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲಗಳನ್ನು ಮಂಜೂರು ಮಾಡಲಾಗಿದೆ ಮತ್ತು ಸುಮಾರು 3,78,004 ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದರು.

ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ ಸಾಮರ್ಥ್ಯ ಸೃಷ್ಟಿ/ವಿಸ್ತರಣೆ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 14 ಯೋಜನೆಗಳನ್ನು ಅನುಮೋದಿಸಲಾಗಿದೆ. ಮೆಗಾ ಫುಡ್ ಪಾರ್ಕ್ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ 2 ಯೋಜನೆಗಳನ್ನು ಅನುಮೋದಿಸಲಾಗಿದೆ, ಇದು ಸರಿಸುಮಾರು 5620 ನೇರ/ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ. 726 ಜಿಲ್ಲೆಗಳಿಗೆ ಒಂದು ಜಿಲ್ಲೆ ಒಂದು ಉತ್ಪನ್ನವನ್ನು ಅನುಮೋದಿಸಿದೆ.

ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಯೋಜನೆಯಡಿ ಯೋಜನಾ ವೆಚ್ಚದ 35% ದರದಲ್ಲಿ ಕ್ರೆಡಿಟ್ ಲಿಂಕ್ಡ್ ಕ್ಯಾಪಿಟಲ್ ಸಬ್ಸಿಡಿ, ಪ್ರತಿ ಯೂನಿಟ್‌ಗೆ ಗರಿಷ್ಠ 10 ಲಕ್ಷ ರೂ. ಹಣಕಾಸಿನ ಸಹಾಯವನ್ನು ನೀಡಲಾಗುತ್ತದೆ. ಸ್ವಸಹಾಯ ಗುಂಪುಗಳ ಪ್ರತಿ ಸದಸ್ಯರಿಗೆ ರೂ 40,000 ದರದಲ್ಲಿ ಆರಂಭಿಕ ಬಂಡವಾಳ, ಸ್ವಸಹಾಯ ಗುಂಪುಗಳ ಒಕ್ಕೂಟಕ್ಕೆ ಗರಿಷ್ಠ ರೂ 4 ಲಕ್ಷ. ರೂ.ಗೆ ಒಳಪಟ್ಟಿರುತ್ತದೆ. ಎಫ್‌ಪಿಒಗಳು, ಎಸ್‌ಎಚ್‌ಜಿಗಳು, ಸಹಕಾರಿ ಸಂಘಗಳು ಅಥವಾ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್‌ಗಳ ಬ್ರ‍್ಯಾಂಡಿAಗ್ ಮತ್ತು ಮಾರ್ಕೆಟಿಂಗ್‌ಗಾಗಿ 50% ವರೆಗೆ ಅನುದಾನ ನೀಡಲಾಗುತ್ತದೆ ಎಂದು ಸಚಿವರು ಉತ್ತರಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.


Spread the love

About inmudalgi

Check Also

ಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ

Spread the loveಬ್ಯಾಂಕಿನ ಆರ್ಥಿಕ ಸಾಕ್ಷರತೆ ಅರಿವು ವಿದ್ಯಾರ್ಥಿಗಳಿಗೆ ಅವಶ್ಯಕ -ಶಿವಪುತ್ರ ಚನ್ನಗೌಡರ. ಮೂಡಲಗಿ : ಬ್ಯಾಂಕಿನ ಆರ್ಥಿಕ ಸಾಕ್ಷರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ