ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೊಂಕು ತಗುಲಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಎರಡು ಕುಟುಂಬದ 8 ಸದಸ್ಯರಿಗೆ ಕೊರೊನಾ ಸೊಂಕು ತಗುಲಿದೆ. ಅದಲ್ಲದೇ ಕಳೆದ ಮೂರು ದಿನಗಳ ಹಿಂದೆ ಕಳ್ಳತನ ಆರೋಪದ ಮೇಲೆ ಬಂಧಿತನಾದ ಆರೋಪಿಗೂ ಕೊರೊನಾ ಸೊಂಕು ತಗುಲಿದೆ. ಇದರಿಂದ ಬೆಳಗಾವಿ ನಗರದ ಕ್ಯಾಂಪ ಪೋಲಿಸ್ ಠಾಣೆಯ ಸಿಬ್ಬಂದಿ ಯಲ್ಲಿ ದುಗುಡಿನ ವಾತಾವರಣ ಸೃಷ್ಟಿಯಾಗಿದ್ದು , ಓರ್ವ ಇನ್ಸಪೆಕ್ಟರ ಸೇರಿದಂತೆ 10 ಸಿಬ್ಬಂದಿಯನ್ನು ಕ್ವಾರಂಟೈನನಲ್ಲಿ ಇರಿಸಲಾಗಿದೆ. ಸಧ್ಯಕ್ಕೆ ಕ್ಯಾಂಪ ಪೊಲೀಸ್ ಠಾಣೆಯನ್ನು ಸಿಲಡೌನ ಮಾಡಲಾಗಿದೆ.
ಜಿಲ್ಲಾ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸದಾಶಿವ ನಗರದ ನರ್ಸ ಓರ್ವರಿಗೆ ಕೊರೊನಾ ಸೊಂಕು ತಗುಲಿದೆ.
ಬೆಳಗಾವಿ ತಾಲೂಕಿನ ಕುದ್ರೆಮನಿ ಗ್ರಾಮದಲ್ಲಿ ಓರ್ವರಿಗೆ, ಮಜಗಾಂವ ಗ್ರಾಮದಲ್ಲಿ ಇಬ್ಬರಿಗೆ ಕೊರೊನಾ ಸೊಂಕು ತಗುುಲಿದೆ.
