ಮೂಡಲಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಗೆ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರು ಆಯ್ಕೆಯಾಗಿದ್ದಾರೆ. ಅವರು ಕಳೆದ 12 ವರ್ಷಗಳಿಂದ ಕ್ರೀಡೆ, ಕಲೆ, ಸಾಹಿತ್ಯ, ಪರಿಸರ ಸಂರಕ್ಷಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಿರಂತರ ಯುವ ಸಂಘಟನೆ, ಜನ ಜಾಗೃತಿಯಂತಹ ಸಮಾಜ ಸೇವಾ ಕಾರ್ಯವನ್ನು ಪರಿಗಣಿಸಿ 2024 – 25ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ಆಯ್ಕೆಮಾಡಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜಾಧ್ಯಕ್ಷ ಡಾ. ಎಸ್. ಬಾಲಾಜಿ ಆದೇಶ ಹೊರಡಿಸಿದ್ದಾರೆ. ಜ.18ರಂದು ದಕ್ಷಿಣ ಕನ್ನಡ ಜಿಲ್ಲೆಯ ಸವಣೂರಿನಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಭಾಸ್ ಗೊಡ್ಯಾಗೋಳ ಅವರಿಗೆ ರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
