ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರವನ್ನು ಬಿಡುಗಡೆ
ಮೂಡಲಗಿ: ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಸಂಬಂಧಿಸಿದ ತಾಲೂಕು ಮಟ್ಟದ ಅನುμÁ್ಠನ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಮೂಡಲಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಅನಿಲಕುಮಾರ್ ದಳವಾಯಿ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ವೇಳೆ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನ್ನನ್ನವರ, ಸಿಡಿಪಿಒ ಯಲ್ಲಪ್ಪ ಗದಾಡಿ, ಬಿಇಒ ಅಜೀತ ಮನ್ನಿಕೇರಿ, ಹೆಸ್ಕಾಂ ಅಧಿಕಾರಿ ಎಂ.ಎಸ್.ನಾಗನ್ನವರ, ಶಿರಸ್ಥೆದಾರ ಪರಸಪ್ಪ ನಾಯಕ, ತಾ.ಪಂ ಸಹಾಯಕ ನಿರ್ದೇಶಕರಾದ ಸಂಗಮೇಶ ರೊಡ್ಡನ್ನವರ, ಚಂದ್ರಶೇಖರ ಬಾರ್ಕಿ, ಗ್ಯಾರಂಟಿ ಯೋಜಜನೆಗಳ ತಾಲೂಕು ಮಟ್ಟದ ಅನುμÁ್ಠನ ಸಿಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.