ವಿಮೆ ಯೋಜನೆಗಳ ನೋಂದಣಿ ಅಭಿಯಾನ ಕಾರ್ಯಕ್ರಮ*
ಮೂಡಲಗಿ: ಪಟ್ಟಣದ ತಾಲೂಕು ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ತಾಪಂ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ನೋಂದಣಿ ಅಭಿಯಾನ ಕಾರ್ಯಕ್ರಮ ಜರುಗಿತು
ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮಾತನಾಡಿ, ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಎರಡು ವಿಮೆಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಇದರಿಂದ ಕುಟುಂಬಕ್ಕೆ ಆರ್ಥಿಕ ಸಹಾಯ ಸಿಗುತ್ತದೆ ಎಂದರು.
ತಾಪಂ ಸಹಾಯಕ ನಿರ್ದೇಶಕ ಚಂದ್ರಶೇಖರ ಬಾರ್ಕಿ ಮಾತನಾಡಿ, ಅಪಘಾತದಲ್ಲಿ ಸಾವು-ನೋವು ಸಂಭವಿಸಿದ ಸಂದರ್ಭದಲ್ಲಿ ಕುಟುಂಬಕ್ಕೆ ಆರ್ಥಿಕ ಸಹಾಯ ಸಿಗಲಿ ಎಂಬ ಉದ್ದೇಶದಿಂದ ಸರಕಾರ ಕಡಿಮೆ ಮೊತ್ತ ವಿಮೆಗಳನ್ನು ಜಾರಿಗೆ ತಂದಿದೆ. ಅನಿವಾರ್ಯ ಸಂದರ್ಭದಲ್ಲಿ ಕುಟುಂಬಕ್ಕೆ ಆರ್ಥಿಕ ಸಹಾಯ ಸಿಗುತ್ತದೆ. ಸ್ವಸಹಾಯ ಸಂಘದ ಸದಸ್ಯರು ಜನರಿಗೆ ಜಾಗೃತಿ ಮೂಡಿಸಿ, ವಿಮೆ ಮಾಡಿಸುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.
ಅಭಿಯಾನದಲ್ಲಿ 2218 ಜನರು ಎರಡು ವಿಮೆಗಳ ನೋಂದಣಿ ಮಾಡಿಕೊಂಡರು.
ಈ ವೇಳೆಯಲ್ಲಿ ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನ್ನವರ, ತಾಪಂ ತಾಂತ್ರಿಕ ಸಂಯೋಜಕ ನಾರ್ಗಾಜುನ ಇಳಿಗೇರ, ಶಿವರಾಜ ಚಳ್ಳಿಕೇರಿ, ಬ್ಯಾಂಕ್ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.