Breaking News
Home / ಬೆಳಗಾವಿ / ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಗೆ ಆರ್ಶೀವದಿಸಿದ ಮತದಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಗೆ ಆರ್ಶೀವದಿಸಿದ ಮತದಾರ

Spread the love

ಮೂಡಲಗಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯನ್ನು ಬಾರಿ ಬಹುಮತದಿಂದ ಗೆಲ್ಲಿಸುವ ಮೂಲಕ ಆಮ್ ಆದ್ಮಿ ಪಕ್ಷವನ್ನು ತಿರಸ್ಕರಿಸಿದ್ದು, ಆ ಪಕ್ಷದ ನೇತಾರ ಮಾಜಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಮತ್ತು ಉಪಮುಖ್ಯಮಂತ್ರಿ ಮನಿಷ್ ಸೀಸೋಡಿಯಾ ಸೋಲುವ ಮೂಲಕ ಬಾರಿ ಹಿನ್ನೆಡೆ ಉಂಟಾಗಿದೆ. ಹೀಗಾಗಿ ಬಿಜೆಪಿಗೆ ಆರ್ಶೀವದಿಸಿದ ಮತದಾರ ಬಂಧುಗಳಿಗೆ ಬಿಜೆಪಿಯನ್ನು ಗೆಲ್ಲಿಸುವಲ್ಲಿ ವಿಶೇಷ ಶ್ರಮವಹಿಸಿದ ದೆಹಲಿ ಬಿಜೆಪಿ ಕಾರ್ಯಕರ್ತರಿಗೆ ಹೃದಯಪೂರ್ವಕ ಧನ್ಯವಾದಗಳು ನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಶನಿವಾರ ಫೆ-08 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಅಣ್ಣಾ ಹಜಾರೆ ಅವರ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಅಧಿಕಾರಿಕ್ಕೆ ಬಂದಿರುವ ಆಮ್ ಆದ್ಮಿ ಪಾರ್ಟಿಯ ಸಚಿವ ಸಂಪುಟದ ಹಲವಾರು ಸಚಿವರು ಭ್ರಷ್ಟಾಚಾರ ಕಳಕಿಂತರಾಗಿ ಜೈಲು ಪಾಲಾಗಿರುವುದು ಅತ್ಯಂತ ವಿಪರ್ಯಾಸದ ಸಂಗತಿ. ಸುಳ್ಳಿನ ಅರಮನೆಯನ್ನೇ ನಿರ್ಮಿಸಿ ಅಧಿಕಾರಕ್ಕೆ ಬಂದ ಅರವಿಂದ್ ಕ್ರೇಜಿವಾಲ್ ಅವರನ್ನು ದೆಹಲಿ ಜನ ತಿರಸ್ಕರಿಸಿದ್ದು‌, ಸನ್ಮಾನ್ಯ ಶ್ರೀ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ಜನ ಆಯ್ಕೆ ಮಾಡುವ ಮೂಲಕ ದೆಹಲಿ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ ಎಂದರು.

ಹೀಗಾಗಿ ಈ ಗೆಲುವಿಗೆ ಕಾರಣೀಭೂತರಾದ ದೆಹಲಿ ಮತದಾರ ಬಂಧುಗಳಿಗೂ ಹಾಗೂ ಗೆಲುವಿಗೆ ಪರಿಶ್ರಮ ವಹಿಸಿದ ಬಿಜೆಪಿ ದೆಹಲಿ ಕಾರ್ಯಕರ್ತರಿಗೂ ಹೃತ್ಪೂರ್ವಕವಾದ ಧನ್ಯವಾದಗಳು ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ