ಮೂಡಲಗಿ: ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಸಂತ ಸೇವಾಲಾಲ ಅವರ 286 ನೇ ಜಯಂತಿಯನ್ನು ಆಚರಿಸಲಾಯಿತು.
ಮೂಡಲಗಿ: ತಾಲೂಕಿನ ಅರಭಾವಿ ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಶನಿವಾರಂದು ಶ್ರೀ ಸಂತ ಸೇವಾಲಾಲ ರವರ 286 ನೇ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಮಧುಕುಮಾರಿ ಮತ್ತು ಅನುಪಮಾ ಮಾತನಾಡಿ, ಮಹಾನ ಮಾನತಾವಾದಿ, ಸಮಾಜ ಸುಧಾರಕರಾದ ಸಂತ ಶ್ರೀ. ಸೇವಾ ಲಾಲ ಬಂಜಾರ ಸಮಾಜದ ಏಳಿಗೆಗಾಗಿ ಅನೇಕ ಹೋರಾಟಗಳನ್ನು ಮಾಡಿದರು, ಶ್ರೀ ಸಂತ ಸೇವಾಲಾಲ ಮಹಾರಾಜರು ದೇಶ ಕಂಡ ಶ್ರೇಷ್ಠ ಧಾರ್ಮಿಕ, ಆದ್ಯಾತ್ಮಿಕ ಗುರುಗಳಲ್ಲಿ ಒಬ್ಬರು ಅವರ ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಅಭಿಪ್ರಾಯ ಪಟ್ಟರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಡೀನ್ ಡಾ. ಎಮ್.ಜಿ.ಕೆರುಟಗಿ ಮಾತನಾಡಿ, ಸೇವಾಲಾಲ ಮಹಾರಾಜರ ತತ್ವಾದರ್ಶಗಳನ್ನು ಪ್ರತಿಯೋಬ್ಬರು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಡಾ. ರಾಘವೇಂದ್ರ ಕೆ.ಎಸ್, ಡಾ. ಪ್ರತಿಕ್ಷಾ, ಮತ್ತು ಭೋಧಕ, ಬೋಧಕೇರ ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಸ್ಥಿತರಿದ್ದು ಸಂತ ಸೇವಾಲಾಲ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮಿಸಿದರು.
ವಿಕ್ರಮ ಪೂಜಾರಿ ನಿರೂಪಿಸಿ, ವಂದಿಸಿದರು.