Breaking News
Home / ಬೆಳಗಾವಿ / ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಮುದಾಯದ ಪಾತ್ರ ಅವಶ್ಯ:ಮನೋಜ ಬಂಡ್ರೊಳಿ

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಮುದಾಯದ ಪಾತ್ರ ಅವಶ್ಯ:ಮನೋಜ ಬಂಡ್ರೊಳಿ

Spread the love

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಮುದಾಯದ ಪಾತ್ರ ಅವಶ್ಯ:ಮನೋಜ ಬಂಡ್ರೊಳಿ

ಮೂಡಲಗಿ 28: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಹಾಗೂ ಭೌತಿಕವಾಗಿ ಅಭಿವೃದ್ಧಿ ಆಗಬೇಕಾದರೆ ಸಮುದಾಯದ ಹಾಗೂ ಜನಪ್ರತಿನಿಧಿಗಳ ಪಾತ್ರ ಬಹಳ ಅವಶÀ್ಯ ಎಂದು ಬೆಳಗಾವ ಜಿಲ್ಲಾ ಪಂಚಾಯತ ಸಾಮಾಜಿಕ ಲೆಕ್ಕ ಪರಿಶೋಧನೆಯ ಜಿಲ್ಲಾ ವ್ಯವಸ್ಥಾಪಕ ಮನೋಜ ಬಂಡ್ರೊಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾಮಾಜಿಕ ಲೆಕ್ಕ ಪರಿಶೋದನಾ ಕಾರ್ಯಕ್ರಮದ ಕೊನೆಯ ದಿನದ ಪಾಲಕರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಪ್ರತಿಯೊಂದು ಸರ್ಕಾರಿ ಶಾಲೆಯಲ್ಲಿ ಸರ್ಕಾರದ ಎಲ್ಲ ಯೋಜನೆಗಳು ಸಮರ್ಪಕವಾಗಿ ನಡೆದು ಇಲಾಖೆಯ ಉದ್ಧೇಶ ಸಾಕಾರಗೊಳ್ಳಬೇಕಲ್ಲದೇ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗಿದೆ ಎಂದÀರು. ರಾಜ್ಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಆದರೆ ಇಲ್ಲಿ ತುಕ್ಕಾನಟ್ಟಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿರುವದಕ್ಕೆ ಇಲ್ಲಿ ಶಿಕ್ಷಕರ ಪಾಲಕರ ಕಾರ್ಯ ವೈಖರಿಯೇ ಕಾರಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅರಬಾಂವಿ ಕ್ಷೇತ್ರದ ಶಾಸಕರ ನೆರವಿನಿಂದ ರಾಷ್ಟ್ರೀಯ ಗ್ರಾಮೀಣ ಹಾಗೂ ಸಾಕ್ಷರತಾ ಮಿಷನ್ ವತಿಯಿಂದ 6 ರಿಂದ 8 ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ನೀಡಿದ ಶಾಲಾ ಬ್ಯಾಗ್, ಸಮವಸ್ತ್ರ, ಸ್ವೆಟರ್‍ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಭರಮಣ್ಣ ಉಪ್ಪಾರ ಅರಬಾಂವಿ ಕ್ಷೇತ್ರದ ಶಾಸಕರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಚಿಕ್ಕೋಡಿ ಸಂಸದರ ಸಹಕಾರ ನೆರವಿನಿಂದ ಮೂಡಲಗಿ ವಲಯದ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವದರಿಂದ ವಿದ್ಯಾರ್ಥಿಗಳು ಮತ್ತು ಪಾಲಕರು ಇದರ ಉಪಯುಕ್ತತೆ ಪಡೆದುಕೊಳ್ಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಿವಾ ಪೌಂಡೇಶನ್‍ದ ಶಾನೂರ ಹಿರೇಹೊಳಿ ಶಾಲಾ ಅಭಿವೃದ್ಧಿಗೆ ತಾವು ಸಂಪೂರ್ಣ ಸಹಕಾರ ಕೊಡುವದಾಗಿ ಹೇಳಿದರು.
ಗ್ರಾಮ ಪಂಚಾಯತ ಅದ್ಯಕ್ಷರಾದ ಗಾಯತ್ರಿ ಬಾಗೆವಾಡಿ ಹಾಗೂ ಉಪಾದ್ಯಕ್ಷರಾದ ಸುನಂದಾ ಭಜಂತ್ರಿ ಸಸಿಗೆ ನೀರೆರೆಯುವದರ ಮುಖಾಂತರ ಸಭೆಯನ್ನು ಉದ್ಘಾಟಿಸಿದರು.
ಸಭೆಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧÀನೆಯ ತಾಲೂಕಾ ವ್ಯವಸ್ಥಾಪಕರಾದ ಬಸವರಾಜ ಕುಂಬಾರ ಗ್ರಾಮ ಪಂಚಾಯತ ಸದಸ್ಯರಾದ ಸುಧಾಕರ ಗದಾಡಿ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ, ಕಲ್ಲೋಳಿ ಸಮೂಹ ಸಂಪನ್ಮೂಲ ವ್ಯಕ್ತಿ ಬಸವರಾಜ ಅಂಗÀಡಿ, ಶಿಕ್ಷಕರಾದ ವಿಮಲಾಕ್ಚಿ ತೋರಗಲ್, ಲಕ್ಚ್ಮೀ ಹೆಬ್ಬಾಳ, ಪುಷ್ಪಾ ಭರಮದೆ, ರೂಪಾ ಹೂಲಿಕಟ್ಟಿ, ಪ್ರಿಯಾಂಕಾ ಡಿ.ಕೆ. ಸುಜಾತಾ ಕೋಳಿ, ವಾಸಂತಿ ಬೋರಗುಂಡಿ, ಮಹಾದೇವ ಗೋಮಾಡಿ, ಬಸವರಾಜ ನಾಯಿಕ, ಸೋಮಶೇಖರ ವಾಯ್.ಆರ್. ಚನ್ನಬಸಪ್ಪ ಸೀರಿ, ಅತಿಥಿ ಶಿಕ್ಷಕರಾದ ಹೊಳೆಪ್ಪಾ ಗದಾಡಿ, ಶಿವಲೀಲಾ ಹಣಮಣ್ಣವರ, ಖಾತೂನ್ ನದಾಫ, ಅಣ್ಣಪೂರ್ಣಾ ಹುಲಕುಂದ, ಯಮುನಾ ಹಮ್ಮನವರ, ಪವಿತ್ರಾ ಬಡಿಗೇರ ಉಪಸ್ಥಿತರಿದ್ದರು.
ಸಭೆಯಲ್ಲಿ ನೂರಾರು ಪಾಲಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಕ ಎಮ್.ಡಿ ಗೋಮಾಡಿ ನಿರೂಪಿಸಿ ವಂದಿಸಿದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ