ತಾಲೂಕಾ ಮಟ್ಟದ ಕ್ರೀಡಾಕೂಟ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ
ಕ್ರೀಡೆಯಲ್ಲಿ ಗೆಲ್ಲಬೇಕಾರೆ ನಿರಂತರ ಪ್ರಯತ್ನ ಮಾಡಬೇಕು- ಸಿಪಿಐ ಶ್ರೀಶೈಲ ಬ್ಯಾಕೂಡ
ಮೂಡಲಗಿ : ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಗೆಲ್ಲಬೇಕಾದರೆ ನಿರಂತರ ಪ್ರಯತ್ನ ಹಾಗೂ ಪರಿಶ್ರಮ ಬಹಳ ಮುಖ್ಯವಾಗಿದೆ ಎಂದು ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು.
ಅವರು ಇತ್ತೀಚೆಗೆ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ಡಾ ಅಂಬೇಡ್ಕರ್ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಡವಳೇಶ್ವರ, ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾಕೂಟದ ಬಹುಮಾನ ವಿತರಣೆ ಸಮಾರಂಭದಲ್ಲಿ ವಾಲಿಬಾಲ್, ಖೋ ಖೋ, ರನ್ನಿಂಗ್, ವಿವಿಧ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಟ್ರೋಫಿ ನೀಡಿ ಮಾತನಾಡಿ ಅವರು ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಬೇಕು. ಆ ನಿಟ್ಟಿನಲ್ಲಿ ಯುವ ಸಂಘಟಕ ಸಿದ್ದಣ್ಣ ದುರದುಂಡಿ ಅವರ ನಿಶ್ವಾರ್ಥ ಸೇವೆ ಮತ್ತು ನಿರಂತರ ಸಂಘಟನೆ ಮಾಡುವ ಕಾರ್ಯ ಶ್ಲಾಘನಿಯವಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ ಮನುಷ್ಯ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಿರಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸುವದು ಬಹಳ ಪ್ರಮುಖವಾಗಿದೆ. ಆಟಗಾರರು ಕ್ರೀಡಾ ಮನೋಭಾವನೆಯಿಂದ ಸ್ಪರ್ಧೆಯಲ್ಲಿ ಇರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಅಧ್ಯಕ್ಷರಾದ ಎಲ್ ವಾಯ್ ಅಡಿಹುಡಿ ವಹಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹಣಮಂತ ಹಾವಣ್ಣವರ, ಚಂದ್ರಶೇಖರ ಪತ್ತಾರ್, ಆರಿಫ್ ಇನಾಮದಾರ್, ಪ್ರವೀಣ ಮ್ಯಾಗಾಡಿ, ಶಶಿ ಪಟಗೊಂದಿ, ದನಪಾಲ ಮ್ಯಾಗಾಡಿ ಸಚಿನ್ ಕಾಂಬಳೆ, ರವಿ ಕರಿಗಾರ, ಹಣಮಂತ ಮ್ಯಾಗಾಡಿ ಹಾಗೂ ಎಲ್ಲಾ ಶಾಲೆಯ ಶಿಕ್ಷಕರು ಹಾಗೂ ಕ್ರೀಡಾಪಟುಗಳು, ಮುಂತಾದವರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯಶಿಕ್ಷಕ ಶಶಿಧರ್ ಆರಾಧ್ಯ ನಿರೂಪಿಸಿದರು. ಶಿಲ್ಪಾ ಗಡಾದ ಸ್ವಾಗತಿಸಿದರು. ಸಂಘದ ಅಧ್ಯಕ್ಷ ದುರ್ಗಪ್ಪ ಮ್ಯಾಗಾಡಿ ವಂದಿಸಿದರು.