Breaking News
Home / ಬೆಳಗಾವಿ / ಮೂಡಲಗಿಯಲ್ಲಿ ಡಯಾಲಿಸಿಸ್ ಕೇರ್ ಕೇಂದ್ರವನ್ನು   ಉದ್ಘಾಟಿಸಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಡಯಾಲಿಸಿಸ್ ಕೇರ್ ಕೇಂದ್ರವನ್ನು   ಉದ್ಘಾಟಿಸಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು
ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.


ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.


ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಸಹಯೋಗದಲ್ಲಿ ಡಯಾಲಿಸಿಸ್ ಕೇಂದ್ರವನ್ನು ತೆರೆಯುತ್ತಿದೆ. ಕಿಡ್ನಿ ವೈಫಲ್ಯದಿಂದ ಬಳಲುವ ರೋಗಿಗಳಿಗೆ ಈ ಕೇಂದ್ರವು ಉಪಯುಕ್ತವಾಗಲಿದೆ. ಇದೇ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ನೀಡಬೇಕಾಗುತ್ತದೆ. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಉಚಿತವಾಗಿದೆ. ಯಾವುದಕ್ಕೂ ಹಣ ನೀಡಬೇಕಾಗಿಲ್ಲ. ಎಲ್ಲವೂ ಫ್ರೀ ಆಗಿದೆ ಎಂದು ಅವರು ಹೇಳಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎರಡು ಹಾಸಿಗೆಗಳ ನೂತನ ಡಯಾಲಿಸಿಸ್ ಕೇರ್ ನ್ನು ಲೋಕಾರ್ಪಣೆ ಮಾಡಿದರು.
ಈ ವೇಳೆ ಮೂಡಲಗಿ ಪುರಸಭೆಯ ಅಧ್ಯಕ್ಷೆ ಖುರ್ಷದಾ ನದಾಫ, ಉಪಾಧ್ಯಕ್ಷೆ ಭೀಮವ್ವ ಪೂಜೇರಿ, ಅಪರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಎಸ್. ಗಡೆದ, ತಹಶೀಲ್ದಾರ ಶಿವಾನಂದ ಬಬಲಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ,
ತಾ.ಪಂ.ಇ ಓ ಫಕ್ಕೀರಪ್ಪ ಚೀನ್ನನ್ನವರ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಸಿಡಿಪಿಓ ಯಲ್ಲಪ್ಪ ಗಡಾದ, ಸಿಪಿಐ ಶ್ರೀಶೈಲ ಬ್ಯಾಕುಡ, ಪುರಸಭೆ ಸದಸ್ಯರು, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About inmudalgi

Check Also

ಯೋಜನೆಗಳ ಸದುಪಯೋಗವಾಗಲಿ’ ಕಾರ್ಮಿಕರಿಗೆ ಕಿಟ್ ವಿತರಣೆ | ಗುರುತಿನ ಚೀಟಿ ಮಾಡಿಸಿಕೊಳ್ಳಿ: ಬಾಲಚಂದ್ರ ಜಾರಕಿಹೊಳಿ

Spread the loveಮೂಡಲಗಿ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳ ಸದುಪಯೋಗಕ್ಕೆ ಶಾಸಕ ಮತ್ತು ಬೆವೆಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ