ಮೂಡಲಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಟ್ಟವಾಗಿ ಹರಡುತ್ತಿರುವುದರಿಂದ ಆತಂಕಗೊಂಡಿರುವ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಾರುಕಟ್ಟೆಯನ್ನು ಆರಂಭಿಸಿ ಮಧ್ಯಾಹ್ನ ಸ್ವಯಂ ಪ್ರೇರಣೆಯಿಂದ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ. ಮೂಡಲಗಿ ನಗರದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಿರಾಣಿ,ಬಟ್ಟೆ ಸೇರಿದಂತೆ ಎಲ್ಲ ರೀತಿಯ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಸ್ವಯಂ ಲಾಕ್ ಡೌನ್ ಮಾಡಿಕೊಳ್ಳಲು ಗುರುವಾರ ನಗರದಲ್ಲಿ ನಡೆದ ವ್ಯಾಪಾರಸ್ಥರ ಸಭೆಯಲ್ಲಿ ನಿರ್ಧರಿಸಲಾಯಿತು.
ಜುಲೈ 10ರಿಂದ 20 ರವರೆಗೆ ನಗರದ ಬಟ್ಟೆ,ಕಿರಾಣಿ,ಚಿನ್ನ ಹಾಗೂ ನಗರದ ಸಣ್ಣಪುಟ್ಟ ವ್ಯಾಪಾರ ನಡೆಸುವ ಎಲ್ಲ ಅಂಗಡಿಗಳು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿ ನಂತರ ಮಧ್ಯಾಹ್ನ 2 ಗಂಟೆಗೆ ಎಲ್ಲ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕಾಗಿದೆ ಎಂದು ವ್ಯಾಪಾರಸ್ಥರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಿರಾಣಿ,ಚಿನ್ನ , ಬಟ್ಟೆ ಹಾಗೂ ಇನ್ನಿತರ ವ್ಯಾಪಾರಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು, ಸಲಹೆ ಸೂಚನೆಗಳನ್ನು ನೀಡಿದರು.