ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಡಲಗಿ ತಾಲೂಕು ಪಂಚಾಯತಿ, ಗೋಕಾಕ ಸಾಮಾಜಿಕ ಅರಣ್ಯ ವಲಯ ಹಾಗೂ ಸುಣಧೋಳಿ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಗುರುವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ತಾ.ಪಂ ಇಒ ಎಫ್.ಜಿ.ಚಿನ್ನನವರ ಅವರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಡು ಬೆಳೆಸಬೇಕು. ಬರಗಾಲ, ಪ್ರವಾಹದಂತಹ ಪರಿಸ್ಥಿತಿ ಎದುರಿಸಲು ಇಂತಹ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸುತ್ತವೆ. ಇದೇ ರೀತಿ ವರ್ಷವಿಡೀ ಪರಿಸರ ಸಂರಕ್ಷಣೆ ಮಾಡಬೇಕು ಎಂದರು.
ಸುಣಧೋಳಿ ಗ್ರಾಪಂ ವ್ಯಾಪ್ತಿಯ ಹೊನಕುಪ್ಪಿ ಗಾಯರಾಣ ಪ್ರದೇಶದಲ್ಲಿ 500 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ತಾ.ಪಂ ಸಹಾಯಕ ನಿರ್ದೇಶಕರಾದ ಸಂಗಮೇಶ ರೊಡ್ಡನ್ನವರ, ಚಂದ್ರಶೇಖರ ಬಾರ್ಕಿ, ಉಪ ವಲಯ ಅರಣ್ಯಾಧಿಕಾರಿ ವಿನಯ ಪ್ರಧಾನಿ, ಪಿಡಿಒ ಪುಂಡಲೀಕ ಬಾರ್ಕಿ, ತಾಂತ್ರಿಕ ಸಂಯೋಜಕ ನಾರ್ಗಾಜುನ ಇಳಿಗೇರ, ತಾಂತ್ರಿಕ ಸಹಾಯಕ ಕಾಡೇಶ ಖೋತ ಮತ್ತಿತರರು ಉಪಸ್ಥಿತರಿದ್ದರು.