Breaking News
Home / ಬೆಳಗಾವಿ / ನೀರಾವರಿ ಇಲಾಖೆಯಿಂದ 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರವಾಸಿ ಮಂದಿರವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಉದ್ಘಾಟಿಸಿದರು

ನೀರಾವರಿ ಇಲಾಖೆಯಿಂದ 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರವಾಸಿ ಮಂದಿರವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಉದ್ಘಾಟಿಸಿದರು

Spread the love

ಮೂಡಲಗಿ: ಸಾರ್ವಜನಿಕರ ಕೋರಿಕೆಯ ಮೇರೆಗೆ ಮೂಡಲಗಿ ಪುರಸಭೆ ವ್ಯಾಪ್ತಿಯ ಗುರ್ಲಾಪೂರ (ಕ್ರಾಸ್) ದಲ್ಲಿ ನೂತನವಾಗಿ ಪ್ರವಾಸಿ ಮಂದಿರವನ್ನು ನಿರ್ಮಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.
ಶನಿವಾರ ಸಂಜೆ ಪಟ್ಟಣದ ಗುರ್ಲಾಪೂರ( ಕ್ರಾಸ್) ಬಳಿ ನೀರಾವರಿ ಇಲಾಖೆಯಿಂದ ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ
ನಿರ್ಮಾಣಗೊಂಡಿರುವ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರವಾಸಿ ಮಂದಿರ ನಿರ್ಮಾಣದಿಂದ ಗಣ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಅನುಕೂಲವಾಗಿದೆ ಎಂದವರು ಹೇಳಿದರು.
ಮೂಡಲಗಿ- ಗುರ್ಲಾಪೂರ ಪಟ್ಟಣದಲ್ಲಿ ಪ್ರವಾಸಿ ಮಂದಿರ ನಿರ್ಮಾಣವಾಗಲು ನಮ್ಮ ಬಿಜೆಪಿ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಗೋಕಾಕ ಶಾಸಕರಾದ ರಮೇಶ ಜಾರಕಿಹೊಳಿಯವರ ಸೇವೆ ಬಹಳಷ್ಟಿದೆ. ಅವರೇ ಇದಕ್ಕಾಗಿ 5 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿಸಿದ್ದನ್ನು ಸ್ಮರಿಸಿದ ಅವರು, ಇತರೇ ಫರ್ನಿಚರ್ ಕೆಲಸಗಳಿಗಾಗಿ 40 ಲಕ್ಷ ರೂಪಾಯಿ ಖರ್ಚು ಮಾಡಬೇಕಾಯಿತು. ಸುಮಾರು 5.40 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕವಾಗಿ ನಿರ್ಮಿಸಿರುವ ಅಧಿಕಾರಿಗಳು- ಗುತ್ತಿಗೆದಾರರನ್ನು ಬಾಲಚಂದ್ರ ಜಾರಕಿಹೊಳಿಯವರು ಅಭಿನಂದಿಸಿದರು.
ಈ ಪ್ರವಾಸಿ ಮಂದಿರವನ್ನು ಸ್ವಚ್ಛವಾಗಿಡಬೇಕು. ಗಣ್ಯರು, ಮತ್ತಿತರ ಅಧಿಕಾರಿಗಳು, ಸಾರ್ವಜನಿಕರ ಸಭೆಯನ್ನು ನಡೆಸಲು ಉಪಯೋಗಿಸಬೇಕು. ಅನಾವಶ್ಯಕ ಚರ್ಚೆಯನ್ನು ಮಾಡಲಿಕ್ಕೆ ಇದನ್ನು ದುರ್ಬಳಕೆ ಮಾಡಬೇಡಿ. ಸಭೆಗಳು ಮತ್ತು ಗಣ್ಯರ ವಿಶ್ರಾಂತಿಗಾಗಿ ಇದನ್ನು ಮೀಸಲಿಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮೂಡಲಗಿ ಪುರಸಭೆ ಅಧ್ಯೆಕ್ಷೆ ಖುರ್ಷಾದ ಅನ್ವರ ನದಾಫ, ಆರ್.ಪಿ. ಸೋನವಾಲಕರ, ಮಾಜಿ ಅಧ್ಯಕ್ಷರಾದ ರಾಮಣ್ಣಾ ಹಂದಿಗುಂದ, ಹಣಮಂತ ಗುಡ್ಲಮನಿ, ರವಿ ಸಣ್ಣಕ್ಕಿ, ಸದಸ್ಯರಾದ ಸಂತೋಷ ಸೋನವಾಲಕರ, ಜಯಾನಂದ ಪಾಟೀಲ, ಆನಂದ ಟಪಾಲ, ಸಿದ್ದು ಗಡೇಕಾರ, ಪ್ರಕಾಶ ಮುಗಳಖೋಡ, ಹುಸೇನ ಶೇಖ, ಸುಭಾಸ ಸಣ್ಣಕ್ಕಿ, ರಾಜು ಪೂಜೇರಿ, ಶಿವು ಸಣ್ಣಕ್ಕಿ, ಶಿವು ಚಂಡಕಿ, ರವಿ ಮೂಡಲಗಿ, ಲಕ್ಕಪ್ಪ ಶಾಬನ್ನವರ, ವೀರುಪಾಕ್ಷ ಮುಗಳಖೋಡ, ಅಧಿಕಾರಿಗಳು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About inmudalgi

Check Also

ಸಂಭ್ರಮದಿಂದ ನಾಗರ ಪಂಚಮಿ ಹಬ್ಬ ಆಚರಣೆ

Spread the loveSpread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ