Breaking News
Home / ಬೆಳಗಾವಿ / ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ – ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ – ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

ಮೂಡಲಗಿ: ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.
ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದವರು ತಿಳಿಸಿದ್ದಾರೆ.
ಮೂಡಲಗಿ ಪಟ್ಟಣದ ಈಗಿರುವ ತಹಶೀಲ್ದಾರ ಕಛೇರಿಉ ಮುಂಭಾಗದಲ್ಲಿ ಸುಮಾರು 2 ಎಕರೆ ನಿವೇಶನದಲ್ಲಿ ಪ್ರಜಾಸೌಧ ಕಟ್ಟಡವನ್ನು ನಿರ್ಮಿಸಲಾಗುವುದು. ಈ ಕಟ್ಟಡ ಕಾಮಗಾರಿಯಿಂದ ಒಂದೇ ಕಟ್ಟಡದಲ್ಲಿ ಸರ್ಕಾರದ ಎಲ್ಲ ಕಛೇರಿಗಳು ಕಾರ್ಯನಿರ್ವಹಿಸಲಿವೆ. ಇದರಿಂದ ಸಾರ್ವಜನಿಕರಿಗೆ ವಿವಿಧ ಕಛೇರಿಗಳಿಗೆ ಅಲೆದಾಡುವುದು ತಪ್ಪಲಿದೆ. ಸಾರ್ವಜನಿಕರ ಬಹು ದಿನಗಳ ಪ್ರಮುಖ ಬೇಡಿಕೆಯಾಗಿದ್ದ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ