Breaking News
Home / ಬೆಳಗಾವಿ / ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 3 ಕೋಟಿ ಆಡಳಿತಾತ್ಮಕ ಅನುಮೋದನೆ – ಶಾಸಕ ಬಾಲಚಂದ್ರ ಜಾರಕಿಹೊಳಿ

ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ 3 ಕೋಟಿ ಆಡಳಿತಾತ್ಮಕ ಅನುಮೋದನೆ – ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

*ಮೂಡಲಗಿ-* ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಚಂದ್ರ  ಜಾರಕಿಹೊಳಿಯವರು ಹೇಳಿದರು.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು‌ ಹರ್ಷ ವ್ಯಕ್ತಪಡಿಸಿದರು.
ಇಷ್ಟರಲ್ಲೇ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು. ಮೂಡಲಗಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಇದು ಪಟ್ಟಣದ ಎಪಿಎಂಸಿ ಬಳಿ ನೂತನ ಕಟ್ಟಡವು ಆರಂಭಗೊಳ್ಳಲಿದೆ ಎಂದು ಬಾಲಚಂದ್ರ ಜಾರಕಿಹೊಳಿಯವರು ಮಾಹಿತಿಯನ್ನು ನೀಡಿದರು.


Spread the love

About inmudalgi

Check Also

*ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

Spread the love ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ