ಮೂಡಲಗಿ: ಹಿರಿಯ ಮುತ್ಸದ್ದಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ, ಮಾಜಿ ಸಚಿವ ಡಾ. ಶಾಮನೂರು ಶಿವ ಶಂಕರಪ್ಪ(94) ನವರ ನಿಧನಕ್ಕೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಡಾ. ಶಾಮನೂರು ಶಿವಶಂಕರಪ್ಪನವರು ವಿಧಾನಸಭೆಯ ಹಿರಿಯ ಸದಸ್ಯರು. ಸುಮಾರು ಆರು ಬಾರಿ ಶಾಸಕರಾಗಿ, ರಾಜ್ಯದ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ದಾವಣಗೆರೆಯಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯನ್ನು ತೆರೆದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದರು. ಸಾಮಾಜಿಕ, ಔದ್ಯೋಗಿಕ, ಶೈಕ್ಷಣಿಕ, ಧಾರ್ಮಿಕ, ಆರ್ಥಿಕ ಮುಂತಾದ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಅವಿರತವಾಗಿ ಶ್ರಮಿಸಿದ್ದರು. ಅಪಾರ ದೈವಿ ಭಕ್ತರಾಗಿದ್ದರು. ದಿವಂಗತರ ನಿಧನದಿಂದ ರಾಜ್ಯಕ್ಕೆ ಅಪಾರ ಹಾನಿಯಾಗಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಆ ಪರಮಾತ್ಮನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ತಮ್ಮ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.
IN MUDALGI Latest Kannada News