Breaking News
Home / ತಾಲ್ಲೂಕು / ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಮಹಾಮಾರಿ ಕೊರೊನಾ ಆರ್ಭಟ.

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಮಹಾಮಾರಿ ಕೊರೊನಾ ಆರ್ಭಟ.

Spread the love

ಬೆಳಗಾವಿ : ಜಿಲ್ಲೆಯಲ್ಲಿ ಇಂದು ಕೂಡ ಮಹಾಮಾರಿ ಕೊರೊನಾ ತನ್ನ ಆರ್ಭಟ ಪ್ರದರ್ಶಿಸಲಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಇಂದು ಜಿಲ್ಲೆಯಲ್ಲಿ ಹೊಸದಾಗಿ 60-80 ಕೊರೊನಾ ಪಾಸಿಟಿವ್ ಕೇಸ್‍ಗಳು ಬರುವ ಸಾಧ್ಯತೆಯಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಕೊರೊನಾ ಆತಂಕ ಶುರುವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಗುರುವಾರ 92 ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿದ್ದವು ಕಂಡು ಬರುವ ಸಾಧ್ಯತೆಯಿದೆ.

ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಮೂಡಲಗಿಗೆ ನಗರದಲ್ಲಿ ಒಂದು ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ, ಹಾಗೆ ರಾಜಪೂರ ಗ್ರಾಮದಲ್ಲಿ ಒಂದು ಕೊರೋನಾ ಸೋಂಕು ದೃಢ ಪಟ್ಟಿದೆ.

ಇನ್ನೂ ಗೋಕಾಕ ತಾಲೂಕಿನ ಕೌಜಲಗಿ-8, ಗೋಕಾಕ್ ಸಿಟಿ-2, ದುರದುಂಡಿ-1, ಹಿರೇನಂದಿ-1, ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ.

ಇಷ್ಟು ಹೆಚ್ಚಾಗುತ್ತಿರುವ ಕೊರೋನಾ ಕೇಸ್ ಗಳನ್ನು ನೋಡಿದರೆ ಜನರು ಹೆಚ್ಚಿನ ಜಾಗೃತಿ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ