Breaking News
Home / ತಾಲ್ಲೂಕು / ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ ಅರಭಾವಿ ಕ್ಷೇತ್ರದಾದ್ಯಂತ 1405 ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ : ನಾಗಪ್ಪ ಶೇಖರಗೋಳ

ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ ಅರಭಾವಿ ಕ್ಷೇತ್ರದಾದ್ಯಂತ 1405 ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ : ನಾಗಪ್ಪ ಶೇಖರಗೋಳ

Spread the love

ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮ
ಅರಭಾವಿ ಕ್ಷೇತ್ರದಾದ್ಯಂತ 1405 ಸಸಿಗಳ ನೆಡುವ ಕಾರ್ಯಕ್ರಮಕ್ಕೆ ಚಾಲನೆ : ನಾಗಪ್ಪ ಶೇಖರಗೋಳ
ಗೋಕಾಕ : ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಹಿನ್ನೆಲೆಯಲ್ಲಿ ಅರಭಾವಿ ಮತಕ್ಷೇತ್ರದಾಧ್ಯಂತ ನಾಳೆ ಮಂಗಳವಾರದಂದು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು.
ಸೋಮವಾರದಂದು ಅರಭಾವಿ ಶಾಸಕರ ಗೃಹ ಕಛೇರಿ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾಳೆ ನಡೆಯುವ ಸಸಿ ನೆಡುವ ಕಾರ್ಯಕ್ರಮದಲ್ಲಿ ಕ್ಷೇತ್ರದ ಎಲ್ಲ ಕಾರ್ಯಕರ್ತರು ಹಾಗೂ ಮುಖಂಡರುಗಳು ಭಾಗವಹಿಸಿ ಕೊರೋನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಿಕೊಂಡರು.
ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ಕ್ಷೇತ್ರದ 281 ಮತಗಟ್ಟೆಗಳಲ್ಲಿ ಪ್ರತಿ ಮತಗಟ್ಟೆಗೆ 5 ರಂತೆ ಒಟ್ಟು 1405 ಸಸಿಗಳನ್ನು ನೆಡಲು ಸೂಚಿಸಿದ್ದಾರೆ. ಇದರಲ್ಲಿ ಮೂಡಲಗಿ ಪುರಸಭೆ, ಅರಭಾವಿ, ಕಲ್ಲೋಳಿ ಮತ್ತು ನಾಗನೂರ ಪಟ್ಟಣ ಪಂಚಾಯತಿ ಹಾಗೂ 34 ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಪ್ರತಿ ಮತಗಟ್ಟೆಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ದಿನದಿಂದ ದಿನಕ್ಕೆ ವೇಗವಾಗಿ ಹರಡುತ್ತಿರುವ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರದ ನಿರ್ದೇಶನವನ್ನು ಪಾಲಿಸಬೇಕಾಗುತ್ತದೆ. ಆಯಾ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಒಂದು ಮತಗಟ್ಟೆಗೆ 5 ರಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಬೇಕು. ಇದರಲ್ಲಿ ಎಲ್ಲ ಕಾರ್ಯಕರ್ತರು ಸ್ಯಾನಿಟೈಜರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ನಾಗಪ್ಪ ಶೇಖರಗೋಳ ಮನವಿ ಮಾಡಿಕೊಂಡರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹಾಗೂ ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕಿ ಮಾತನಾಡಿ, ಪಕ್ಷ ಸೂಚಿಸಿರುವ ಹಿನ್ನೆಲೆಯಲ್ಲಿ ಮತ್ತು ರಾಜ್ಯ ಸರ್ಕಾರವು ಒಂದು ವರ್ಷ ಪೂರೈಸಿದ ನಿಮಿತ್ಯ ಈ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಎನ್‍ಎಸ್‍ಎಫ್ ಅತಿಥಿ ಗೃಹದ ಸಹಾಯಕರಾದ ನಿಂಗಪ್ಪ ಕುರಬೇಟ, ಲಕ್ಕಪ್ಪ ಲೋಕುರಿ, ಸಿ.ಪಿ. ಯಕ್ಷಂಬಿ, ಟಿಎಪಿಸಿಎಂಎಸ್ ನಿರ್ದೇಶಕ ಕೆಂಚಪ್ಪ ಮಂಟೂರ, ಅರಭಾವಿ ಪಿಕೆಪಿಎಸ್ ನಿರ್ದೇಶಕ ಹನಮಂತ ಚಿಪ್ಪಲಕಟ್ಟಿ, ದುಂಡಪ್ಪ ಕಲ್ಲಾರ, ಬಸಪ್ಪ ಸಾರಾಪೂರ, ಅಡಿವೆಪ್ಪ ಕಂಕಾಳಿ, ಬಸವರಾಜ ಕೋಣಿ, ರಮೇಶ ಸಂಪಗಾಂವಿ, ಪಾಂಡುರಂಗ ಪಾಟೀಲ, ಭೀಮಶಿ ಮಾಳೇದವರ, ಗಂಗಪ್ಪ ಭರ್ಚಿ, ನಂಜುಂಡಿ ಸರ್ವಿ, ಸಿದ್ಧಾರೂಢ ಮಬನೂರ, ಇಕ್ಬಾಲ್ ಸರ್ಕಾವಸ್, ಶಿವು ಕುಡ್ಡೆಮ್ಮಿ, ಸತ್ತೆಪ್ಪ ಗಡಾದ, ಮಾಳಪ್ಪ ಚಿಗಡೊಳ್ಳಿ, ಬಳಿಗಾರ, ಮಹಾದೇವ ಜಲ್ಲಿ, ಬಿಜೆಪಿ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About inmudalgi

Check Also

ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ

Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ