Breaking News
Home / ತಾಲ್ಲೂಕು / ಶೀಘ್ರದಲ್ಲಿಯೇ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆಯ ಘಟಕ ಆರಂಭ : ಬಾಲಚಂದ್ರ ಜಾರಕಿಹೊಳಿ

ಶೀಘ್ರದಲ್ಲಿಯೇ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆಯ ಘಟಕ ಆರಂಭ : ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ : ಕೊರೋನಾ ಸೊಂಕಿನ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪುತ್ತಿರುವದರಿಂದ ಇದನ್ನು ಹೋಗಲಾಡಿಸಲು ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೇಂದ್ರೀಕೃತ ಆಮ್ಲಜನಕ ಪೂರೈಕೆಯ ಘಟಕವನ್ನು ಪ್ರಾರಂಭಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಕಿಟ್‍ಗಳನ್ನು ಹಸ್ತಾಂತರಿಸುವ ಮುನ್ನ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ದೂರವಾಣಿ ಮೂಲಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕೊರೋನಾ ರೋಗಿಗಳಿಗೆ ಸಮರ್ಪಕ ಆಕ್ಸಿಜನ್ ವ್ಯವಸ್ಥೆ ಇಲ್ಲದ್ದರಿಂದ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವ್ಯಾಪ್ತಿಯಲ್ಲಿ ದಾಖಲಾಗಿರುವ ಕೊರೋನಾ ರೋಗಿಗಳಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದರು.


ಆಕ್ಸಿಜನ್ ಪೂರೈಕೆಯ ಘಟಕಗಳು ಬಹಳಷ್ಟು ಕೇಂದ್ರಗಳಲ್ಲಿ ಲಭ್ಯವಿಲ್ಲ. ಜೀವ ಉಳಿಸುವ ಕೇಂದ್ರಿಕೃತ ಆಮ್ಲಜನಕ ಘಟಕಗಳನ್ನು ಯುದ್ಧೋಪಾದಿಯಲ್ಲಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೊರೋನಾ ಕೇರ್ ಸೆಂಟರ್, ತಾಲೂಕಾ ಸಾರ್ವಜನಿಕ ಆಸ್ಪತ್ರೆ, ವಸತಿ ಶಾಲೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರಿಗಾಗಿ 500 ಹಾಸಿಗೆಗಳನ್ನು ವ್ಯವಸ್ಥೆ ಮಾಡುವಂತೆ ಸೂಚಿಸಿದ ಅವರು, ಜಂಭೋ ಸಿಲಿಂಡರ್, ಪೈಪ್ ಲೈನಿಂಗ್, ಆಕ್ಸಿಜನ್ ಪ್ಲೋ ಮೀಟರ್ಸ್, ನೇಜಲ್ ಕೆನ್ಲಾ, ಇವುಗಳನ್ನೊಳಗೊಂಡ ಕೇಂದ್ರಿಕೃತ ಆಮ್ಲಜನಕ ಪೂರೈಕೆಯ ಘಟಕವನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ರಾಜ್ಯ-ರಾಷ್ಟ್ರಕ್ಕೆ ಮಾದರಿಯಾದ ಬಾಲಚಂದ್ರ ಜಾರಕಿಹೊಳಿ ಅವರ ಸೇವಾ ಕಾರ್ಯ : ಡಾ.ಬೆಣಚಿನಮರಡಿ
ಜನರು ಕಷ್ಟದಲ್ಲಿರುವಾಗ ಅವರಿಗೆ ಸಹಾಯ ಹಸ್ತ ನೀಡುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ. ಜನರ ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸುವ ಮನೋಭಾವನೆ ಬೆಳೆಸಿಕೊಂಡಿರುವ ಅವರನ್ನು ನಮ್ಮ ಭಾಗದ ಜನರು ಆರಾಧ್ಯ ದೈವನೆಂದು ಕರೆಯುತ್ತಾರೆ ಎಂದು ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ ಹೇಳಿದರು.
ಮಂಗಳವಾರದಂದು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಕೊರೋನಾ ರೋಗಿಗಳಿಗೆ ದಿನಬಳಕೆಯ ಮತ್ತು ಮೆಡಿಕಲ್ ಕಿಟ್ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊರೋನಾದಂತಹ ಹೆಮ್ಮಾರಿಯ ರೋಗಕ್ಕೆ ಜನರು ಭಯಭೀತರಾಗಿ ಬದುಕುತ್ತಿದ್ದಾರೆ. ಎಷ್ಟೋ ಸಂದರ್ಭಗಳಲ್ಲಿ ಅವರಿಗೆ ಕಷ್ಟಗಳು ಬಂದು-ಹೋಗಿವೆ. ಲಾಕ್‍ಡೌನ್‍ನಂತಹ ಸಂದರ್ಭದಲ್ಲಿಯೂ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಗಳಿಗೂ ಆಹಾರ ಧಾನ್ಯದ ಕಿಟ್‍ಗಳನ್ನು ತಮ್ಮ ಸ್ವಂತ ವೆಚ್ಚದಲ್ಲಿ ವಿತರಿಸುವ ಮೂಲಕ ಮಾನವೀಯ ಮೌಲ್ಯಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಸಾಕ್ಷಿಯಾಗಿ ಪ್ರತಿಯೊಬ್ಬರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಹೇಳಿದರು.
ಕಳೆದ ವರ್ಷ ಸಂಭವಿಸಿದ ಮಳೆ ಹಾಗೂ ಪ್ರವಾಹದಿಂದಾಗಿ ಜನರು ತಮ್ಮ ಮನೆಗಳನ್ನು ತೊರೆದು ಕಷ್ಟಗಳನ್ನು ಎದುರಿಸುತ್ತಿರುವಾಗ ಅವರ ಬದುಕಿಗೆ ಆಸರೆಯಾಗಿ ನಿಂತು ಆಪದ್ಭಾಂಧವರಾದರು. ನಿರಾಶ್ರಿತರಿಗೆ ಆಶ್ರಯದಾತರಾಗಿ ಈಗ ಕೊರೋನಾ ಸೊಂಕಿತರಿಗೆ ದಿನಬಳಕೆ ಮತ್ತು ಮೆಡಿಕಲ್ ಕಿಟ್‍ಗಳನ್ನು ನೀಡುವ ಮೂಲಕ ಯಾರೂ ಮಾಡದ ಸಮಾಜಮುಖಿ ಕೆಲಸವನ್ನು ಬಾಲಚಂದ್ರ ಜಾರಕಿಹೊಳಿ ಅವರು ಮಾಡುವ ಮೂಲಕ ಇಡೀ ರಾಜ್ಯ ಹಾಗೂ ರಾಷ್ಟ್ರಕ್ಕೆ ಮಾದರಿಯಾಗುವ ಕೆಲಸವನ್ನು ಮಾಡುತ್ತಿದ್ದಾರೆಂದು ಶಾಸಕರ ಕಾರ್ಯವನ್ನು ಶ್ಲಾಘಿಸಿದರು.
ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹಾಗೂ ಮೂಡಲಗಿ ತಹಶೀಲ್ದಾರ ದಿಲಶಾದ್ ಮಹಾತ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೋನಾ ಸೊಂಕಿತರಿಗೆ ಸಾಕಷ್ಟು ಅನುಕೂಲಗಳನ್ನು ಒದಗಿಸಿಕೊಡುತ್ತಿದ್ದಾರೆ. ಆರೋಗ್ಯ ಇಲಾಖೆಯ ಮೂಲಕ ಸೊಂಕಿತರಿಗೆ ಕಿಟ್‍ಗಳನ್ನು ನೀಡುತ್ತಿದ್ದಾರೆ. ಅದರಲ್ಲಿ ರೋಗಿಗಳಿಗೆ 10 ದಿನಕ್ಕೆ ಬೇಕಾಗುವ ದಿನಬಳಕೆ ಮತ್ತು ಔಷಧೋಪಚಾರದ ಸಾಮಗ್ರಿಗಳಿವೆ. ಕೊರೋನಾ ಸೊಂಕಿತರಿಗೆ ಧೈರ್ಯ ತುಂಬುವ ಮೂಲಕ ಶೀಘ್ರ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ರೋಗಿಗಳಿಗೆ ಯಾವುದೇ ತೊಂದರೆಗಳು ಆಗದಂತೆ ಅಗತ್ಯ ಚಿಕಿತ್ಸೆ ನೀಡುವಂತೆ ನಮಗೆ ಸೂಚನೆ ನೀಡಿದ್ದಾರೆ. ರೋಗಿಗಳ ಬಗ್ಗೆ ಇವರಿಗಿರುವ ಕಾಳಜಿಯನ್ನು ಇದರಿಂದ ಎತ್ತಿ ತೋರಿಸುತ್ತದೆ ಎಂದು ಹೇಳಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾತನಾಡಿ, ಕೊರೋನಾ ಸೊಂಕಿನ ಬಗ್ಗೆ ಪ್ರತಿಯೊಬ್ಬರೂ ಆತಂಕಗೊಂಡಿದ್ದಾರೆ. ಜೊತೆಗೆ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸೊಂಕಿತರಿಗೆ ಮನೋಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜಕ್ಕೆ ಮಾದರಿಯಾಗಿದ್ದಾರೆ. ನಮ್ಮ ಆರೋಗ್ಯ ಇಲಾಖೆಗೂ ಸಾಕಷ್ಟು ನೆರವು ನೀಡುತ್ತಿರುವ ಶಾಸಕರಿಗೆ ನಾವೆಲ್ಲರೂ ಋಣಿಗಳಾಗಿದ್ದೇವೆ ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಆಂಟಿನ್, ಗೋಕಾಕ ಸಿಪಿಐ ಗೋಪಾಲ ರಾಠೋಡ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ, ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ, ಗೋಕಾಕ ಗ್ರಾಮೀಣ ಪಿಎಸ್‍ಐ ಖಿಲಾರಿ, ಎನ್‍ಎಸ್‍ಎಫ್ ಅತಿಥಿ ಗೃಹದ ನಿಂಗಪ್ಪ ಕುರಬೇಟ, ದಾಸಪ್ಪ ನಾಯಿಕ, ಲಕ್ಕಪ್ಪ ಲೋಕುರಿ, ಚನ್ನಮಲ್ಲಿಕಾರ್ಜುನ ಯಕ್ಷಂಬಿ, ಮಿರ್ಜಾನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಕೊರೋನಾ ಸೊಂಕಿತರಿಗೆ ದಿನಬಳಕೆ ಮತ್ತು ಮೆಡಿಕಲ್ ಕಿಟ್‍ಗಳನ್ನು ಗೋಕಾಕ ಮತ್ತು ಮೂಡಲಗಿ ಸರ್ಕಾರಿ ಆಸ್ಪತ್ರೆಗಳ ಮುಖ್ಯ ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಕಿಟ್‍ನಲ್ಲೇನಿದೆ : ಟೂರ್‍ಬ್ಯಾಗ್, ಬೆಡ್‍ಶೀಟ್, ರಗ್ಗು, ಟೂತ್ ಪೇಸ್ಟ್, ಟೂತ್ ಬ್ರಷ್, ವ್ಹೀಲ್ ಸೋಫ್, ಡೆಟಾಲ್ ಸೋಫ್, ಕೊಬ್ಬರಿ ಎಣ್ಣೆ, ಕುಡಿಯುವ ನೀರಿನ ಬಾಟಲ್, ಬಾಚಣಿಕೆ, ಫೌಡರ್, ಟವೇಲ್, ಸ್ಟೀಲ್ ತಾಟು, ಸ್ಟೀಲ್ ಲೋಟಾ, ಬಿಸ್ಕೀಟ್, ಡ್ರೈ ಫುಡ್ಸ್, ಎನ್-95 ಮಾಸ್ಕ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಜರ್, ಕಾಟನ್ ರೋಲ್, ಬ್ಯಾಂಡೇಜ್, ವಿಕ್ಸ್ ಮುಂತಾದವುಗಳಿವೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ