ದಿನಾಂಕ 05.08.2020 ರಂದು ಅಯೋಧ್ಯಾ ಶ್ರೀ ರಾಮ ಮಂದಿರ ಭೂಮಿ ಪೂಜಾ ಕಾರ್ಯಕ್ರಮವನ್ನು ಶ್ರೀ ನರೇಂದ್ರ ಮೋದಿ , ಸನ್ಮಾನ್ಯ ಪ್ರಧಾನ ಮಂತ್ರಿಗಳು , ಭಾರತ ಸರ್ಕಾರ ರವರು ನೆರವೇರಿಸಲಿದ್ದು , ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವ ಅವಶ್ಯಕತೆ ಇರುವುದರಿಂದ ಸದರ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತ ( ಬೆಳಗಾವಿ ತಾಲೂಕು ಹೊರತುಪಡಿಸಿ ) ಮದ್ಯದ ಅಂಗಡಿಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ( ಬೆಳಗಾವಿ ತಾಲೂಕು ಹೊರತುಪಡಿಸಿ ) ದಿನಾಂಕ 04.08.2020 ರ ಸಾಯಂಕಾಲ 06:00 ಗಂಟೆಯಿಂದ ದಿನಾಂಕ 05.08.2020 ರ ಮಧ್ಯರಾತ್ರಿ 12:00 ಗಂಟೆಯವರೆಗೆ ಎಲ್ಲ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಅದರ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಒಫಿಸತಕ್ಕದ್ದು ಎಂದು ಆದೇಶಿಸಿದ್ದಾರೆ.