ಪತ್ರಿಕೆಗಳ ವರದಿಗೆ ಸ್ಪಂದಿಸಿ ಕಾರ್ಮಿಕ ಇಲಾಖೆಯ ಸಚಿವರ ಗಮನಕ್ಕೆ ತಂದ : ಲಕ್ಕನ್ ಸವಸುದ್ದಿ
ಮೂಡಲಗಿ :- “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರಿಗೆ ಬೆಳಗಾವಿ ಜಿಲ್ಲಾ ಕಾಂಗ್ರೇಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಲಕ್ಕನ್ ಸವಸುದ್ದಿ ಪ್ರತಿಕ್ರಿಯೆ ನೀಡಿ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ ಮತ್ತು ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಕಾರ್ಮಿಕ ಇಲಾಖೆಯ ಆಯುಕ್ತರ ಗಮನಕ್ಕೆ ತಂದಿರುವುದಾಗಿ ಪತ್ರಿಕೆಯಲ್ಲಿ ತಿಳಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಂಗಳವಾರ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿ ನೋಡಿದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಾರ್ಮಿಕರಿಗೆ ವಂಚನೆ ಮಾಡುತ್ತಿರುವ ಸ್ಪಷ್ಟವಾಗಿ ಗೋಚರಿಸುತ್ತದೆ ಆದರಿಂದ ಕಾರ್ಮಿಕ ಇಲಾಖೆಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಕಾರ್ಮಿಕ ಇಲಾಖೆಯ ಆಯುಕ್ತರಿಗೆ ಪೋನ್ ಮಾಡುವ ಮೂಲಕ ಈ ಘಟನೆಯ ಬಗ್ಗೆ ಹಾಗೂ ಪತ್ರಿಕೆಯಲ್ಲಿ ಪ್ರಕಟಗೊಂಡ ವರದಿಯ ಬಗ್ಗೆ ಅವರ ಗಮನಕ್ಕೆ ತಂದಿದ್ದೇನೆ, ಅವರು ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳದಿದ್ದರೆ ಜಿಲ್ಲಾದ್ಯಂತ ಕಾರ್ಮಿಕರೊಂದಿಗೆ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.
