Breaking News
Home / ತಾಲ್ಲೂಕು / ಪತ್ರಿಕೆಗಳ ವರದಿಗೆ ಸ್ಪಂದಿಸಿದ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ, ಘಟನೆ ಬಗ್ಗೆ ತನಿಖೆ ಮಾಡಲು ಅಧಿಕಾರಿಗಳಿಗೆ ಸಚಿವರಿಂದ ಸೂಚನೆ

ಪತ್ರಿಕೆಗಳ ವರದಿಗೆ ಸ್ಪಂದಿಸಿದ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ, ಘಟನೆ ಬಗ್ಗೆ ತನಿಖೆ ಮಾಡಲು ಅಧಿಕಾರಿಗಳಿಗೆ ಸಚಿವರಿಂದ ಸೂಚನೆ

Spread the love

ಮೂಡಲಗಿ : “ಮೂಡಲಗಿ ಕಾರ್ಮಿಕ ಇಲಾಖೆಯ ಕರ್ಮಕಾಂಡ ! ಫಲಾನುಭವಿಗಳ ಆಯ್ಕೆ ಇಲ್ಲದೆ ಮನಸ್ಸಿಗೆ ಬಂದ ಹಾಗೆ ಕಿಟ್ಟ ವಿತರಿಸಿದ ಅಧಿಕಾರಿ, ನಿಜವಾದ ಕಾರ್ಮಿಕರಿಗಿಲ್ಲ “ಕಾರ್ಮಿಕ ಇಲಾಖೆಯ ಆಹಾರ ಕಿಟ್ಟ” ಎಂಬ ಶೀರ್ಷಿಕೆ ಅಡಿ ಮಂಗಳವಾರ ದಿನ ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗೆ ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ ಬೆಳಗಾವಿಯ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಈ ಘಟನೆ ಬಗ್ಗೆ ತನಿಖೆ ಮಾಡಲು ಸೂಚಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಂಗಳವಾರ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿ ಬಗ್ಗೆ ಬೆಳಗ್ಗೆ ಪೋನ್ ಮೂಲಕ ಮಾಹಿತಿ ಬಂದಿದೆ. ಆದರಿಂದ ಸಂಬoಧಪಟ್ಟ ಅಧಿಕಾರಿಗಳಿಗೆ ಘಟನೆ ಬಗ್ಗೆ ಸಮಗ್ರವಾಗಿ ತನಿಖೆ ಮಾಡಲು ಸೂಚಿಸಿದ್ದೇನೆ, ಕಾರ್ಮಿಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಹಾಗೆ ತಪ್ಪಿತಸ್ಥರಿಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.


Spread the love

About inmudalgi

Check Also

ಪ್ರವಚನ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರು ಸಹಕರಿಸಿ: ಶಿವಲಿಂಗ ಸ್ವಾಮೀಜಿ

Spread the loveಪ್ರವಚನ ಕಾರ್ಯಕ್ರಮ ಯಶಸ್ವಿಗೆ ಸ್ಥಳೀಯರು ಸಹಕರಿಸಿ: ಶಿವಲಿಂಗ ಸ್ವಾಮೀಜಿ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ