ಗೋಕಾಕ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ.
ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್‍ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಕೊರೋನಾ ವೈರಸ್ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ನಾಳೆ ಸರಳವಾಗಿ ನಡೆಯಲಿರುವ ಗಣೇಶ ಉತ್ಸವದ ನಿಮಿತ್ಯ ನಾಡಿನ ಬಾಂಧವರಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.
Home / ತಾಲ್ಲೂಕು / ಪರಿಸರ ಸ್ನೇಹಿ ಗಣಪತಿಗಳನ್ನು ಪ್ರತಿಷ್ಠಾಪಿಸಿ. ನಾಡಿನ ಜನತೆಗೆ ಗಣೇಶ್ ಹಬ್ಬದ ಶುಭ ಕೋರಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
Check Also
ತಾಯಿಯ ಎದೆ ಹಾಲಿನ ಮಹತ್ವ” ಬಗ್ಗೆ ಜಾಗೃತಿ ಕಾರ್ಯಕ್ರಮ
Spread the love ಮೂಡಲಗಿ : ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು …