ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಲ್ಲಿ ಆಚರಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮೂವರು ಉತ್ತಮ ಶಿಕ್ಷಕರೆಂದು ಸನ್ಮಾನಿಸಿ ಗೌರವಿಸಿದರು
ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಶಿಕ್ಷಕರ ದಿನಾಚರಣೆ
‘ಶಿಕ್ಷಕರು ಸರ್ವಕಾಲಿಕನ ಪೂಜೀತರು’
ಮೂಡಲಗಿ: ‘ಶಕ್ತಿಶಾಲಿ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಶಿಕ್ಷಕರು ಸರ್ವಕಾಲಿಕ ಪೂಜೀತರು’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಹೇಳಿದರು.
ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಶಿಕ್ಷಕ ವೃತ್ತಿ ಪವಿತ್ರವಾದ ವೃತ್ತಿಯಾಗಿದೆ ಎಂದರು.
ಲಯನ್ಸ್ ಕ್ಲಬ್‍ವು ಪ್ರತಿ ವರ್ಷವು ವಲಯದಲ್ಲಿಯ ಎಲೆಮರೆ ಕಾಯಿಯಂತೆ ಇರುವ ಸಾಧಕ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿರುವೆವು ಎಂದರು.
ಕಲ್ಲೋಳಿಯ ಮುರಾರ್ಜಿ ವಸತಿ ಶಾಲೆಯ ಕೆ.ಬಿ. ಸಾಯಣ್ಣವರ, ಪಾಮಲದಿನ್ನಿ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಶಿವಾನಂದ ಅಂಗಡಿ ಹಾಗೂ ನಾಗನೂರಿನ ಅರಣ್ಯಸಿದ್ಧೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ವೈ. ಕೋಟೂರ ಅವರನ್ನು ‘ಉತ್ತಮ ಶಿಕ್ಷಕ-2020’ ಎಂದು ಸನ್ಮಾನಿಸಿ ಗೌರವಿಸಿದರು.
ಸನ್ಮಾನಿತ ಶಿಕ್ಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಲಯನ್ಸ್ ಕ್ಲಬ್ ಸದಸ್ಯ ಹಾಗೂ ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿ ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವ ರೂವಾರಿಗಳಾಗಿದ್ದಾರೆ ಎಂದರು.
ಲಯನ್ಸ್ ಕ್ಲಬ್ ವಿಭಾಗೀಯ ಅಧ್ಯಕ್ಷ ವೆಂಕಟೇಶ ಸೋನವಾಲಕರ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಸಂಜಯ ಮೋಕಾಶಿ, ಖಜಾಂಚಿ ಸಂಜಯ ಮಂದ್ರೋಳಿ ವೇದಿಕೆಯಲ್ಲಿದ್ದರು.
ಶಿವಾನಂದ ಗಾಡವಿ, ಸುರೇಶ ನಾವಿ, ಸುಪ್ರೀತ ಸೋನವಾಲಕರ, ಶಿವಬೋಧ ಯರಝರ್ವಿ ಇದ್ದರು.
ಬಾಲಶೇಖರ ಬಂದಿ ಪ್ರಾಸ್ತಾವಿಕ ಮಾತನಾಡಿ ಪರಿಚಯಿಸಿದರು, ಮಲ್ಲಿನಾಥ ಶೆಟ್ಟಿ ಸ್ವಾಗತಿಸಿದರು, ಮಹಾವೀರ ಸಲ್ಲಾಗೋಳ ನಿರೂಪಿಸಿದರು, ಶಿವಾನಂದ ಕಿತ್ತೂರ ವಂದಿಸಿದರು.
Home / ತಾಲ್ಲೂಕು / ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಲ್ಲಿ ಆಚರಿಸಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮೂವರು ಉತ್ತಮ ಶಿಕ್ಷಕರೆಂದು ಸನ್ಮಾನಿಸಿ ಗೌರವಿಸಿದರು
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …