Breaking News
Home / ತಾಲ್ಲೂಕು / ಅಶೋಕ ಗಸ್ತಿ ನಿಧನ ಕಡಾಡಿ ಸಂತಾಪ

ಅಶೋಕ ಗಸ್ತಿ ನಿಧನ ಕಡಾಡಿ ಸಂತಾಪ

Spread the love

ಅಶೋಕ ಗಸ್ತಿ ನಿಧನ ಕಡಾಡಿ ಸಂತಾಪ

ಬೆಳಗಾವಿ: ಪಕ್ಷದ ಸಂಘಟನೆಯ ಕಾರ್ಯದಲ್ಲಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದ ಪಕ್ಷದ ಶಿಸ್ತಿನ ಸಿಪಾಯಿ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು.
ಇತ್ತೀಚಿಗೆ ನನ್ನೊಂದಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದ ಅವರು ರಾಯಚೂರ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ರಾಯಚೂರ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾಗಿ, 2010 ರಲ್ಲಿ ರಾಯಚೂರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಾ ಕೆಳಹಂತದಿಂದ ನಾಯಕರಾಗಿ ಬೆಳೆದಿದ್ದ ಗಸ್ತಿಯವರ ಸಂಘಟನಾ ಚತುರತೆಯನ್ನ ಗಮನಿಸಿ ಇತ್ತೀಚಿಗೆ ರಾಜ್ಯ ನಾಯಕರು ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. ಅಶೋಕ ಗಸ್ತಿ ಅವರು ನನ್ನ ಆತ್ಮೀಯ ಸ್ನೇತರಾಗಿದ್ದರು. ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ