1.28 ಕೋಟಿ ರೂ. ವೆಚ್ಚದ ಮೆಳವಂಕಿ ಶಾಲಾ ಕೊಠಡಿಗಳ ಕಾಮಗಾರಿಗೆ ಗುದ್ದಲಿ ಪೂಜೆ
ಗೋಕಾಕ : ಇಲ್ಲಿಗೆ ಸಮೀಪದ ಮೆಳವಂಕಿಯ ಸರ್ಕಾರಿ ಪ್ರೌಢ ಶಾಲೆಯ ನೂತನ ಕೊಠಡಿಗಳಿಗೆ ಇತ್ತೀಚೆಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಮೆಳವಂಕಿ ಪ್ರೌಢ ಶಾಲೆ ಮತ್ತು ಪ್ರಾಥಮಿಕ ಶಾಲೆಗಳ ನೂತನ ಕೊಠಡಿಗಳ ನಿರ್ಮಾಣಕ್ಕೆ 1.28 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸರ್ಕಾರಿ ಪ್ರೌಢ ಶಾಲೆಯ ನೂತನ ಐದು ಕೊಠಡಿಗಳಿಗೆ ನಬಾರ್ಡ ಯೋಜನೆಯಡಿ 75 ಲಕ್ಷ ರೂ. ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ಕೊಠಡಿಗಳ ನಿರ್ಮಾಣಕ್ಕೆ 53.38 ಲಕ್ಷ ರೂ.ಗಳು ನಬಾರ್ಡದಿಂದ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವಂತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅಧಿಕಾರಿಗಳಿಗೆ ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದಪ್ಪ ಹಂಜಿ, ಮಹಾದೇವ ಪತ್ತಾರ, ಸತ್ತೆಪ್ಪ ಬಬಲಿ, ಅಲ್ಲಪ್ಪ ಕಂಕಣವಾಡಿ, ಸಣ್ಣದೊಡ್ಡಪ್ಪ ಕರೆಪ್ಪನವರ, ಮಹಾದೇವ ಕರಿಗಾರ, ಪಾಂಡು ಕರಿಗಾರ, ಅಡಿವೆಪ್ಪ ಹಡಗಿನಾಳ, ಕಾಮಸಿ ಕಿತ್ತೂರ, ಗುತ್ತಿಗೆದಾರ ಲಕ್ಷ್ಮಣ ಗಡಾದ, ಮುಂತಾದವರು ಉಪಸ್ಥಿತರಿದ್ದರು
 
		 IN MUDALGI Latest Kannada News
IN MUDALGI Latest Kannada News
				 
			 
			 
						
					 
						
					 
						
					 
					
				