ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವ ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ನಿಧನರಾಗಿರುವ ಸುದ್ದಿಯನ್ನು ಸ್ಪಷ್ಟ ಪಡಿಸಿದ್ದಾರೆ.
ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ, ಈ ಬಾರಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಅತ್ಯುತ್ತಮ ಕಾರ್ಯ ನಿರ್ವಹಿಸಿ ಜನರ ಪ್ರಶಂಸೆಗೆ ಪಾತ್ರರಾಗಿದ್ದರು.
IN MUDALGI Latest Kannada News