Breaking News
Home / ತಾಲ್ಲೂಕು / ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

Spread the love

ಮೂಡಲಗಿ: ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು.
ಬುಧವಾರ ರಾತ್ರಿ ದೆಹಲಿ ಎಮ್ಸ್ ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆಯಲಾಯಿತು. ಕಳೆದ 25 ವರ್ಷಗಳಿಂದ ನಾನು ಅವರೊಂದಿಗೆ ಉತ್ತಮ ಒಡನಾಟ ಹೊಂದಿ, ಅತ್ಯಂತ ಆತ್ಮೀಯರು ಹಾಗೂ ಮಾರ್ಗದರ್ಶಕರಾಗಿದ್ದರು.
ರಾಜ್ಯದಲ್ಲಿ ಯಡಿಯೂರಪ್ಪ, ಅನಂತಕುಮಾರ, ಹಕ್ಕಬುಕ್ಕರಂತೆ ಪಕ್ಷದ ಸಂಘಟನೆ ಮಾಡಿದರು. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿ ಸುರೇಶ ಅಂಗಡಿ ಮತ್ತು ನಾನು ಹಕ್ಕಬುಕ್ಕರಂತೆ ಪಕ್ಷದ ಸಂಘಟನೆಯನ್ನು ಮಾಡಿದ್ದೇವು.
ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ. ದೇಶಾದಂತ್ಯ ಕಿಸಾನ್ ರೈಲು ವಿಸ್ತರಣೆ ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರ-ಧಾರವಾಡ ಹೊಸ ಮಾರ್ಗ ತರುವಲ್ಲಿ ಅವರ ಪಾತ್ರ ಮಹತ್ವದ್ದು. ಜಿಲ್ಲೆಯ ಅಭಿವೃದ್ದಿಯ ಹರಿಕಾರ, ಅಂಗಡಿ ಅವರು ಸೌಜನ್ಯದ ಸಾಕಾರ ಮೂರ್ತಿಯಾಗಿದ್ದರು.
ನೇರ ನಡೆ-ನುಡಿ ಎಲ್ಲರೊಂದಿಗೆ ಬೆರೆತು ಜಿಲ್ಲೆಯ ಎಲ್ಲ ರಾಜಕಾರಣಿಗಳ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದರು. ಇವರ ಅಗಲಿಕೆಯಿಂದ ರಾಜ್ಯಕ್ಕೆ ಹಾಗೂ ಪಕ್ಷಕ್ಕೆ ಅಪಾರ ಹಾನಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಅವರ ಕುಟುಂಬದಲ್ಲಾದ ದುಖಃದಲ್ಲಿ ನಾವು ಸಹಭಾಗಿಯಾಗಿ ಅವರ ಕುಟುಂಬಕ್ಕೆ ದುಖಃವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಬೆಳಗಾವಿ: ನವದೆಹಲಿಯ ಕರ್ನಾಟಕ ಭವನ 01 ರಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಶ್ರೀ ಸುರೇಶ ಅಂಗಡಿ ಅವರಿಗೆ ಗೌರವಾರ್ಥ ಇಂದು ಪುಷ್ಪನಮನ ಮಾಡಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದರಾದ ಜಿ. ಎಂ ಸಿದ್ದೇಶ, ಬಿ. ವಾಯ್. ರಾಘವೇಂದ್ರ, ಶೋಭಾ ಕರದ್ಲಾಂಚೆ, ಪ್ರತಾಪ ಸಿಂಹ, ಸಚಿವ ವಿ ಸೋಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

 


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ