Breaking News
Home / Recent Posts / ಮನುಷ್ಯ ತನ್ನ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಆಚಾರ, ವಿಚಾರಗಳಿಂದ ಬದುಕನ್ನು ಸುಂದರಗೊಳಿಸಿಕೊಳ್ಳಬೇಕು’- ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ

ಮನುಷ್ಯ ತನ್ನ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಆಚಾರ, ವಿಚಾರಗಳಿಂದ ಬದುಕನ್ನು ಸುಂದರಗೊಳಿಸಿಕೊಳ್ಳಬೇಕು’- ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ

Spread the love

ಮೂಡಲಗಿ ಸಮೀಪದ ಮುನ್ಯಾಳದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ‘ಮನೆ, ಮನೆಗೆ ಪ್ರವಚನ’ ದ 8ನೇ ದಿನದ ಕಾರ್ಯಕ್ರಮದಲ್ಲಿ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಯವರು ಮಾತನಾಡಿದರು

ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯರು ನುಡಿ

ಶರೀರ       ಮತ್ತು       ಮನಸ್ಸನ್ನು ಹತೋಟಿಯಲ್ಲಿಡಬೇಕು 

ಮೂಡಲಗಿ: ‘ಮನುಷ್ಯ ತನ್ನ ಶರೀರ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ಉತ್ತಮ ಆಚಾರ, ವಿಚಾರಗಳಿಂದ ಬದುಕನ್ನು ಸುಂದರಗೊಳಿಸಿಕೊಳ್ಳಬೇಕು’

ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಯೋಗೀಶ್ವರ ಮಠದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಮುನ್ಯಾಳ ಗ್ರಾಮದಲ್ಲಿ ಅಧಿಕ ಮಾಸದ ನಿಮಿತ್ತವಾಗಿ ಒಂದು ತಿಂಗಳ ಪರ್ಯಂತರವಾಗಿ ಹಮ್ಮಿಕೊಂಡಿರುವ ‘ಮನೆ, ಮನೆಗೆ ಅರುಹಿನ ಅರಮನೆ ಪ್ರವಚನ ಮತ್ತು ಕೋವಿಡ್ ಅರಿವು’ ಅಭಿಯಾನದ ಶ್ರೀಕಾಂತ ದೊಡ್ಡಗೋಳ ಆತಿಥ್ಯದಲ್ಲಿ ನಡೆದ 8ನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇನ್ನೊಬ್ಬರ ತಪ್ಪುಗಳನ್ನು ಹುಡುಕುವುದಕಿಂತ ನಿಮ್ಮಲ್ಲಿಯ ತಪ್ಪುಗಳನ್ನು ಗುರುತಿಸಿ, ತಿದ್ದಿಕೊಂಡು ಶುದ್ಧ ನಡೆಯ ಮೂಲಕ ಒಳ್ಳೆಯ ಸಮಾಜವನ್ನು ಕಟ್ಟಬೇಕು ಎಂದರು.

ಪ್ರವಚನಕಾರ ಶರಣ ಲಕ್ಷ್ಮಣ ದೇವರು ಮಾತನಾಡಿ ಸಚ್ಛಾರಿತ್ರ್ಯದಿಂದ ನಡೆದರೆ ಯಾವ ರೋಗ, ರುಜೀನಗಳು ಬಾಧಿಸುವುದಿಲ್ಲ. ಶರಣರ ತತ್ವಗಳನ್ನು ಪಾಲಿಸುವ ಮೂಲಕ ಸಾತ್ವಿಕ ಬದುಕನ್ನು ನಡೆಸಬೇಕು ಎಂದರು.
ಅತಿಥಿ ಆನಂದರಾವ ನಾಯ್ಕ್, ಹಣಮಂತ ಗೋಡಿಗೌಡರ ಮಾತನಾಡಿದರು.
ಪ್ರಾರಂಭದಲ್ಲಿ ಕಾರ್ತಿಕಶಾಸ್ತ್ರೀ, ವೀರಯ್ಯಶಾಸ್ತ್ರೀಗಳು ಮಂತ್ರಘೋಷ ಪಠಣ ಮಾಡಿದರು. ಐಶ್ವರ್ಯ ತಳವಾರ ಕೊರೊನಾ ಹಾಡುಗಳನ್ನು ಹೇಳಿ ಗಮನಸೆಳೆದಳು.
ವಿಠ್ಠಲ ದೊಡ್ಡಗೋಳ, ಭೀಮಪ್ಪ ಬಡಿಗೇರ, ಬಾಳಪ್ಪ ಬಡಿಗೇರ, ಬಸಮ್ಮ ಕೆಂಚರಡ್ಡಿ ಭಾಗವಹಿಸಿದ್ದರು.
ಡಾ. ಕೆ.ಎಚ್. ನಾಗರಾಳ ನಿರೂಪಿಸಿದರು, ಶಿಕ್ಷಕ ಪ್ರವೀಣ ಹುಕ್ಕೇರಿ ವಂದಿಸಿದರು.
ಇಂದಿನ ನಡೆ ಶಾಲೆಯ ಕಡೆ: ಸೆ. 26ರಂದು ಬೆಳಿಗ್ಗೆ 8ಕ್ಕೆ ಗ್ರಾಮದ ವಾಸ್ತುರತ್ನ ಗಂಗಾಧರ ಶಾಲೆಯಲ್ಲಿ ಶ್ರೀಗಳ ಸಾನ್ನಿಧ್ಯದಲ್ಲಿ ಪ್ರವಚನ ಇರುವುದು. ಡಾ. ವೀಣಾ ಕನಕರಡ್ಡಿ ಅತಿಥಿಯಾಗಿ ಭಾಗವಹಿಸುವರು.


Spread the love

About inmudalgi

Check Also

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ